ಇಂಗ್ಲೆಂಡ್ ವಿರುದ್ಧ ಟೆಸ್ಟ್ ಕ್ರಿಕೆಟ್ಗೆ ಪದಾರ್ಪಣೆ ಮಾಡಿದ್ದ ಸರ್ಫರಾಜ್ ಖಾನ್ ಮೊದಲ ಪಂದ್ಯದಲ್ಲೇ ಮಿಂಚಿದ್ದರು. ಪದಾರ್ಪಣೆ ಪಂದ್ಯದಲ್ಲಿ ಮಿಂಚಿದ್ದ ಸರ್ಫರಾಜ್ ಖಾನ್ ಕ್ರಿಕೆಟ್ ಅಭಿಮಾನಿಗಳ ಮನ ಗೆದ್ದಿದ್ದರು.
ಟೀಂ ಇಂಡಿಯಾದ ಯುವ ಕ್ರಿಕೆಟಿಗ ಸರ್ಫರಾಜ್ ಖಾನ್ಗೆ ಸದಾ ಪ್ರೋತ್ಸಾಹ ನೀಡಿ ದೇಶವನ್ನು ಪ್ರತಿನಿಧಿಸುವಲ್ಲಿ ಪ್ರಮುಖ ಪಾತ್ರವಹಿಸಿದ್ದ ಆತನ ತಂದೆ ನೌಶಾದ್ ಖಾನ್ ಅವರಿಗೂ ಉಡುಗೊರೆ ಕೊಡುವುದಾಗಿ ಆನಂದ್ ಮಹೀಂದ್ರಾ ಘೋಷಿಸಿದ್ದರು.
ಆನಂದ್ ಮಹೀಂದ್ರಾ ಅವರು ಉಡುಗೊರೆಯಾಗಿ ಕಳುಹಿಸಿದ ಥಾರ್ ಕಾರಿನೊಂದಿಗೆ ಸರ್ಫರಾಜ್ ಕುಟುಂಬ ಫೋಟೋಗಳನ್ನು ತೆಗೆದು ಸಾಮಾಜಿಕ ಮಾಧ್ಯಮದಲ್ಲಿ ಪೋಸ್ಟ್ ಮಾಡಿಕೊಂಡಿದೆ.