ಮಂಗಳೂರು: ಮಂಗಳೂರಿನ ಕಣಚೂರು ಮೆಡಿಕಲ್ ಕಾಲೇಜಿನ ಮುಸ್ಲಿಂ ವಿದ್ಯಾರ್ಥಿನಿಯನ್ನು ಹಿಂದೂ ಯುವಕನನ್ನು ಪ್ರೀತಿಸಿದ್ದಕ್ಕಾಗಿ ಆಕೆಯ ಪೋಷಕರು ಅಪಹರಣ ಮಾಡಿದ್ದಾರೆ ಎನ್ನಲಾಗಿದೆ.
ಪೊಲೀಸ್ ವಿಚಾರಣೆ ವೇಳೆ ವಿದ್ಯಾರ್ಥಿನಿ ಪೋಷಕರ ಜೊತೆ ಹೋಗುವುದಿಲ್ಲ ಎಂದು ಹೇಳಿಕೆ ನೀಡಿದ್ದಾಳೆ . ವಿದ್ಯಾರ್ಥಿನಿಯನ್ನು ರಕ್ಷಣೆ ಮಾಡಿರುವ ಪೊಲೀಸರು ಮೆಡಿಕಲ್ ತಪಾಸಣೆಗೆ ಕಳುಹಿಸಿದ್ದು, ಆ ಬಳಿಕ ಆಕೆ ಇಚ್ಚಿಸಿದ ಸ್ಥಳ ಅಥವಾ ಸಾಂತ್ವನ ಕೇಂದ್ರಕ್ಕೆ ಕಳುಹಿಸಲು ಪೊಲೀಸರು ಚಿಂತನೆ ನಡೆಸಿದ್ದಾರೆ.
