ಟೋಕಿಯೋ : ಜಪಾನಿನ ಪ್ರಧಾನ ಮಂತ್ರಿ ಹಾಗೂ ಆಡಳಿತಾರೂಢ ಲಿಬರಲ್ ಡೆಮಾಕ್ರಟಿಕ್ ಪಕ್ಷದ ನಾಯಕ ಶಿಗೇರು ಇಶಿಬಾ ಅವರು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ.
ಅವರು, “ನಾನು ಲಿಬರಲ್ ಡೆಮಾಕ್ರಟಿಕ್ ಪಕ್ಷದ ಅಧ್ಯಕ್ಷ ಸ್ಥಾನ ಹಾಗೂ ಪ್ರಧಾನ ಮಂತ್ರಿ ಹುದ್ದೆಗೆ ರಾಜೀನಾಮೆ ನೀಡಲು ನಿರ್ಧರಿಸಿದ್ದೇನೆ” ಎಂದು ಘೋಷಿಸಿದರು.
ಜುಲೈನಲ್ಲಿ ನಡೆದ ಜಪಾನ್ ಸಂಸತ್ತಿನ ಮೇಲ್ಮನೆ ಚುನಾವಣೆಯಲ್ಲಿನ ಸೋಲಿನ ಜವಾಬ್ದಾರಿಯನ್ನು ವಹಿಸಿಕೊಳ್ಳುವಂತೆ ಮೈತ್ರಿಕೂಟದಿಂದ ಒತ್ತಡ ಹೆಚ್ಚಾದಂತೆ, ಅವರು ರಾಜೀನಾಮೆ ನೀಡುವುದಾಗಿ ಘೋಷಿಸಿದ್ದಾರೆ.