ಬೆಂಗಳೂರಿನ ಎಂ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ನಡೆದ 3ನೇ ಟಿ20 ಪಂದ್ಯದಲ್ಲಿ ಆರಂಭಿಕ ಆಘಾತದ ನಂತರವೂ ರೋಹಿತ್ ಹಾಗೂ ರಿಂಕು ಸಿಂಗ್ ಅಬ್ಬರದ ಬ್ಯಾಟಿಂಗ್ ನೆರವಿನಿಂದ ಭಾರತ ಬೃಹತ್ ಮೊತ್ತ ಕಲೆ ಹಾಕಿದೆ.
ಟಾಸ್ ಗೆದ್ದು ಬ್ಯಾಟಿಂಗ್ ಮಾಡಿದ ಭಾರತಕ್ಕೆ ನಿರೀಕ್ಷಿತ ಆರಂಭ ಸಿಗಲಿಲ್ಲ. ಕೇವಲ 22ರನ್ ಆಗುಷ್ಟರಲ್ಲಿ 4 ವಿಕೆಟ್ ಕಳೆದುಕೊಂಡು ಆಘಾತಕ್ಕೆ ಒಳಗಾಗಿತ್ತು. ವಿರಾಟ್ ಕೊಹ್ಲಿ, ಸಂಜು ಸಾಮ್ಸನ್ ಗೋಲ್ಡನ್ ಡಕ್ ಆದರೆ, ಶಿವಂ ದುಬೆ 1 ಹಾಗೂ ಜೈಸ್ವಾಲ್ 4 ರನ್ಗಳಿಗೆ ವಿಕೆಟ್ ಒಪ್ಪಿಸಿದರು
ಆದರೆ 5ನೇ ವಿಕೆಟ್ಗೆ ರಿಂಕು ಸಿಂಗ್(69) ಜೊತೆಗೂಡಿದ ರೋಹಿತ್ ಶರ್ಮಾ 190 ರನ್ಗಳ ದಾಖಲೆಯ ಜೊತೆಯಾಟ ನಡೆಸಿದರು.
ರೋಹಿತ್ 69 ಎಸೆತಗಳಲ್ಲಿ 8 ಸಿಕ್ಸರ್ ಹಾಗೂ 11 ಬೌಂಡರಿಗಳ ನೆರವಿನಿಂದ ಅಜೇಯ 121 ರನ್ಗಳಿಸಿದರು. ರಿಂಕು ಸಿಂಗ್ 39 ಎಸೆತಗಳಲ್ಲಿ 2 ಬೌಂಡರಿ ಹಾಗೂ 6 ಸಿಕ್ಸರ್ಗಳ ನೆರವಿನಿಂದ ಅಜೇಯ 69 ರನ್ಗಳಿಸಿದರು.