ಬೆಂಗಳೂರು : ಬಿಜೆಪಿ ಮುಖಂಡ, ವಕೀಲ ದೇವರಾಜೇಗೌಡ ಅವರನ್ನು ಚಿತ್ರದುರ್ಗ ಜಿಲ್ಲೆಯ ಹಿರಿಯೂರಿನಲ್ಲಿ ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ಮಹಿಳೆ ಮೇಲೆ ಲೈಂಗಿಕ ದೌರ್ಜನ್ಯ ಹಿನ್ನೆಲೆ ಹೊಳೆನರಸೀಪುರ ಠಾಣೆಯಲ್ಲಿ ದಾಖಲಾಗಿದ್ದ ಪ್ರಕರಣದಲ್ಲಿ ವಶಕ್ಕೆ ಪಡೆಯಲಾಗಿದೆ. ಮಹಿಳೆ ಮೇಲೆ ಲೈಂಗಿಕ ದೌರ್ಜನ್ಯ (Sexual assault) ಸಂಬಂಧ ಕೇಸ್ ದಾಖಲಾಗಿತ್ತು. ಇಂದು ಅದೇ ಮಹಿಳೆ ವಿರುದ್ಧ ದೇವರಾಜೇಗೌಡ ಹೆಬ್ಬಾಳ ಠಾಣೆಯಲ್ಲಿ ದೂರು ದಾಖಲಿಸಿದ್ದರು. ಇದೀಗ ದೇವರಾಜೇಗೌಡ ಹಿರಿಯೂರು ಠಾಣೆ ಪೊಲೀಸರ ವಶದಲ್ಲಿದ್ದಾರೆ
ಮಹಿಳೆ ಮೇಲೆ ಲೈಂಗಿಕ ದೌರ್ಜನ್ಯ ಹಿನ್ನೆಲೆ ಹೊಳೆನರಸೀಪುರ ಠಾಣೆಯಲ್ಲಿ ದಾಖಲಾಗಿದ್ದ ಪ್ರಕರಣದಲ್ಲಿ ಬಿಜೆಪಿ ಮುಖಂಡ, ವಕೀಲ ದೇವರಾಜೇಗೌಡ ಅವರನ್ನು ಚಿತ್ರದುರ್ಗ ಜಿಲ್ಲೆಯ ಹಿರಿಯೂರಿನಲ್ಲಿ ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ಮಹಿಳೆ ಮೇಲೆ ಲೈಂಗಿಕ ದೌರ್ಜನ್ಯ ಹಿನ್ನೆಲೆ ಹೊಳೆನರಸೀಪುರ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಪ್ರಜ್ವಲ್ ರೇವಣ್ಣ ಪೆನ್ ಡ್ರೈವ್ ವೈರಲ್ ವಿಚಾರದಲ್ಲಿ ದೇವರಾಜೇಗೌಡಗೆ ಸಂಕಷ್ಟ ಎದುರಾಗಿದೆ.