ಮಹಿಳೆಯರ ದಿನಾಚರಣೆಯ ಈ ದಿನದಂದು ಪ್ರಧಾನಿ ನರೇಂದ್ರ ಮೋದಿ ಸರ್ಕಾರ ಮಹಿಳೆಯರಿಗೆ ರೂಪಿಸಿದೆ ಯೋಜನೆಗಳನ್ನು ಸದುಪಯೋಗ ಮಾಡಿಕೊಂಡು ಸ್ವಾವಲಂಬಿ ಜೀವನ ನಡೆಸುತ್ತಿರುವ ಮಹಿಳೆಯರ ವಿಡಿಯೋಗಳನ್ನು ಮೋದಿ ಶೇರ್ ಮಾಡಿಕೊಂಡಿದ್ದಾರೆ.
ವಿಶ್ವಾದ್ಯಾಂತ ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆಯನ್ನು ಮಾರ್ಚ್ 8 ರಂದು ಆಚರಿಸಲಾಗುತ್ತಿದ್ದು, ಪ್ರಧಾನಿ ನರೇಂದ್ರ ಮೋದಿ ಅವರು ಸಾಮಾಜಿಕ ಜಾಲತಾಣಗಳ ಮೂಲಕ ಶುಭಾಯಶ ಕೋರಿದ್ದಾರೆ.
ಮಹಿಳೆರಿಗಾಗಿ ಕೆಲ ಸ್ಫೂರ್ತಿದಾಯಕ ಮಾತುಗಳೊಂದಿಗೆ ವಿಡಿಯೋಗಳನ್ನು ಹಂಚಿಕೊಂಡಿದ್ದಾರೆ. ತಮ್ಮ ಸರ್ಕಾರ ಜಾರಿ ತಂದಿರುವ ಯೋಜನೆಗಳನ್ನು ಉಲ್ಲೇಖಿಸಿ ಮಹಿಳೆಯರಿಗೆ ಯಾವ ರೀತಿ ಅನುಕೂಲವಾಗುತ್ತಿದೆ ಎನ್ನುವುದ ಬಗ್ಗೆ ತಿಳಿಸಿದ್ದಾರೆ.