ಬೆಂಗಳೂರು: ಡಿ.ಕೆ. ಶಿವಕುಮಾರ್ ರಾಜ್ಯದ ಮುಖ್ಯಮಂತ್ರಿ ಆಗಿ ಪ್ರಮಾಣವಚನ ಸ್ವೀಕರಿಸಿ, ಲೋಕಭವನದಲ್ಲಿ ನಡೆದ ಸಮಾರಂಭದಲ್ಲಿ ಅವರು ಮುಖ್ಯಮಂತ್ರಿ ಅಧಿಕಾರ ವಹಿಸಿಕೊಂಡಿದ್ದಾರೆ.
ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಎಲ್ಲಾ ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್ ನೀಡುವ ಮಹತ್ವದ ಯೋಜನೆ ಘೋಷಣೆ ಮಾಡಿದ್ದಾರೆ.
ಎಲ್ಲಾ ವಿದ್ಯಾರ್ಥಿಗಳಿಗೆ, ಕಾಲೇಜು, ಪಿಜಿ, ಪಿಯುಸಿ, ಎಸ್ಎಸ್ಎಲ್ಸಿ ಪಾಸ್ಗೆ ಉಚಿತ ಬಸ್ಸು ಪಾಸ್ ಕೊಡುತ್ತೇವೆ ಎಂದು ಸುದ್ದಿಗೋಷ್ಠಿಯಲ್ಲಿ ಮುಖ್ಯಮಂತ್ರಿಯವರು ಘೋಷಣೆ ಮಾಡಿದರು
ಮುಖ್ಯಮಂತ್ರಿಯವರು ನಿರುದ್ಯೋಗಿ ಯುವಕರಿಗೆ ಉದ್ಯೋಗ ಕಲ್ಪಿಸುವ ಬಗ್ಗೆ ಮುಂದೆ ಚರ್ಚಿಸಿ ತೀರ್ಮಾನ ಮಾಡುತ್ತೇವೆ ಎಂದು ಭರವಸೆ ನೀಡಿದರು.
