ಕೋಲ್ಕತ್ತಾ: ಮುಂಬರುವ ಲೋಕಸಭಾ ಚುನಾವಣೆಗೆ (Lok Sabha Election) ಬಿಜೆಪಿ (BJP) ತನ್ನ 5ನೇ ಪಟ್ಟಿಯಲ್ಲಿ 11 ಅಭ್ಯರ್ಥಿಗಳ ಹೆಸರನ್ನು ಬಿಡುಗಡೆ ಮಾಡಿದೆ. ಈ ಪಟ್ಟಿಯಲ್ಲಿ ಕೆಲವು ಅಚ್ಚರಿ ವ್ಯಕ್ತಿಗಳಿಗೆ ಟಿಕೆಟ್ ನೀಡಿದೆ. ಪಶ್ಚಿಮ ಬಂಗಾಳದ (West Bengal) ಸಂದೇಶಖಾಲಿಯಲ್ಲಿ ಸಂಚಲನ ಮೂಡಿಸಿದ್ದ ಲೈಂಗಿಕ ದೌರ್ಜನ್ಯ (Sexual harassment) ಪ್ರಕರಣದ ಸಂತ್ರಸ್ತೆಗೆ ಟಿಕೆಟ್ ನೀಡಿದೆ.
ಬಿಜೆಪಿ ಈ ಒಂದು ನಿರ್ಧಾರ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿಗೆ ಚಿಂತೆಯನ್ನುಂಟು ಮಾಡಿದೆ. ಸಂದೇಶಖಾಲಿ ಪ್ರಕರಣದಲ್ಲಿ ಲೈಂಗಿಕ ಕಿರುಕುಳ ಪ್ರಕರಣ ದಾಖಲಿಸಿದ್ದ ರೇಖಾ ಪಾತ್ರಾ ಅವರನ್ನು ಬಿಜೆಪಿ ಬಸೀರ್‌ಹತ್ ಕ್ಷೇತ್ರದಿಂದ ಕಣಕ್ಕಿಳಿಸಿದೆ. ಈ ಬಾರಿಯ ಪಶ್ಚಿಮ ಬಂಗಾಳದ ಚುನಾವಣೆಯಲ್ಲಿ ಸಂದೇಶಖಾಲಿಯಲ್ಲಿನ ಮಹಿಳೆಯರ ಮೇಲಿನ ದೌರ್ಜನ್ಯ ಪ್ರಕರಣ ದೊಡ್ಡ ವಿಷಯವಾಗಿದೆ. ಇಂತಹ ಪರಿಸ್ಥಿತಿಯಲ್ಲಿ ಸಂದೇಶಖಾಲಿ ಸಂತ್ರಸ್ತೆಯನ್ನ ಕಣಕ್ಕಿಳಿಸುವ ಮೂಲಕ ಬಿಜೆಪಿ ತೃಣಮೂಲ ಕಾಂಗ್ರೆಸ್‌ಗೆ ದೊಡ್ಡ ಸವಾಲೊಡ್ಡಿದೆ.