ನವದೆಹಲಿ: ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ 370 ಸ್ಥಾನಗಳನ್ನು ಪಡೆಯಲಿದೆ. ಬಿಜೆಪಿ ನೇತೃತ್ವದ ಎನ್‌ಡಿಎ ಮೈತ್ರಿಕೂಟಕ್ಕೆ 400ಕ್ಕೂ ಹೆಚ್ಚು ಸ್ಥಾನಗಳು ಸಿಗಲಿವೆ ಅಂತ ಪ್ರಧಾನಿ ನರೇಂದ್ರ ಮೋದಿ ವಿಶ್ವಾಸದ ಮಾತುಗಳನ್ನಾಡಿದ್ದಾರೆ.
ರಾಷ್ಟ್ರಪತಿ ಭಾಷಣದ ಮೇಲಿನ ವಂದನಾ ನಿರ್ಣಯದ ಮೇಲೆ ಲೋಕಸಭೆಯಲ್ಲಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಕಾಂಗ್ರೆಸ್ ಪಕ್ಷಕ್ಕೆ ಅತ್ಯುತ್ತಮ ವಿಪಕ್ಷವಾಗುವ ಅವಕಾಶ ಸಿಕ್ಕಿತ್ತು.
ಕಳೆದ 10 ವರ್ಷ ಕಳೆದರೂ ಒಳ್ಳೆಯ ವಿಪಕ್ಷವಾಗಲಿಲ್ಲ. ಬೇರೆಯವರಿಗೂ ನಾಯಕತ್ವ ಬಿಟ್ಟುಕೊಡಲಿಲ್ಲ ಅಂತ ಮೋದಿ ಆರೋಪಿಸಿದ್ರು.