ಬೆಂಗಳೂರು: ಮಂಗಳವಾರ ಈ ಸಂಬಂಧ ವಿಧಾನಸಭೆಯಲ್ಲಿ ಸ್ವಯಂ ಪ್ರೇರಿತವಾಗಿ ಹೇಳಿಕೆ ನೀಡಿದ ಸಿದ್ದರಾಮಯ್ಯ, ರಾಜ್ಯ ಸರಕಾರಿ ನೌಕರರ ವೇತನ, ಭತ್ಯೆ ಮತ್ತು ಪಿಂಚಣಿ ಪರಿಷ್ಕರಣೆಗೆ 2022ರ ಅಕ್ಟೋಬರ್ 19ರ 7ನೆ ರಾಜ್ಯ ವೇತನ ಆಯೋಗದಂತೆ . ಅದರಂತೆ, ವೇತನ ಆಯೋಗವು 2024ರ ಮಾರ್ಚ್ 24ರಂದು ವರದಿಯನ್ನು ಸಲ್ಲಿಸಿರುತ್ತದೆ ಎಂದರು.
ರಾಜ್ಯ ಸರಕಾರಿ ನೌಕರರಿಗೆ ಏಳನೆ ವೇತನ ಆಯೋಗದ ಶಿಫಾರಸ್ಸು ಜಾರಿ ಹಿನ್ನೆಲೆಯಲ್ಲಿ ನೌಕರರ ವೇತನ ಪರಿಷ್ಕರಣೆಯಿಂದ ರಾಜ್ಯ ಸರಕಾರಕ್ಕೆ ವಾರ್ಷಿಕ 20,208 ಕೋಟಿ ರೂ. ಗಳಷ್ಟು ಹೆಚ್ಚುವರಿ ವೆಚ್ಚ ಉಂಟಾಗುತ್ತದೆ.
2024-25ರ ಆಯವ್ಯಯದಲ್ಲಿ ಹೆಚ್ಚುವರಿ ವೆಚ್ಚಕ್ಕೆ ಅಗತ್ಯ ಅನುದಾನವನ್ನು ಮೀಸಲಿಡಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರಕಟಿಸಿದ್ದಾರೆ.