ಸಿದ್ದರಾಮಯ್ಯ ಮತ್ತು ಡಿ.ಕೆ.ಶಿವಕುಮಾರ್ ವಿರುದ್ಧ ನಿಂದಿಸಿ ವಿಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಹರಿಬಿಡಲಾಗಿದೆ. ಕನ್ನಡದಲ್ಲಿ ನಿಂದಿಸಿ ಕೊನೆಗೆ ತುಳುವಿನಲ್ಲಿ ಮಾತನಾಡಲಾಗಿದೆ. ಸುರತ್ಕಲ್ ಮೂಲದ ಯುವಕ ಈ ವಿಡಿಯೋ ಮಾಡಿದ್ದು ಎನ್ನಲಾಗುತ್ತಿದೆ. ಎನ್ಎಸ್ಯುಐ ನೀಡಿದ ದೂರಿನ ಮೇರೆಗೆ ಸೈಬರ್ ಕ್ರೈಂ ಠಾಣೆಯಲ್ಲಿ ದೂರು ದಾಖಲಾಗಿದೆ
ಅವಹೇಳನಕಾರಿ ಪೋಸ್ಟ್ ಹಾಕಿದ ಆರೋಪದಡಿ ಮಂಗಳೂರಿನ ಯುವಕನ ವಿರುದ್ಧ ಪ್ರಕರಣ ದಾಖಲಾಗಿದೆ. ಎನ್ಎಸ್ಯುಐ ಜಿಲ್ಲಾಧ್ಯಕ್ಷ ಸುಹಾನ್ ಆಳ್ವಾ ನೀಡಿದ ದೂರಿನ ಮೇರೆಗೆ ಸೈಬರ್ ಕ್ರೈಂ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.