ಬಾಂಗ್ಲಾದೇಶದ ಮುಖ್ಯ ಸಲಹೆಗಾರ (Bangladesh Chief Counsel) ಮುಹಮ್ಮದ್ ಯೂನಸ್ (Muhammad Yunus) ಅವರ ಪತ್ರಿಕಾ ಕಾರ್ಯದರ್ಶಿ ಶಫಿಕುಲ್ ಇಸ್ಲಾಂ ಅವರು ಬಾಂಗ್ಲಾದಲ್ಲಿ ಹಿಂದೂಗಳು ಸುರಕ್ಷಿತರಾಗಿದ್ದಾರೆ ಮತ್ತು ಇಂಟರ್ನ್ಯಾಷನಲ್ ಸೊಸೈಟಿ ಫಾರ್ ಕೃಷ್ಣ ಕಾನ್ಶಿಯಸ್ನೆಸ್ (ಇಸ್ಕಾನ್ ಅನ್ನು ನಿಷೇಧಿಸುವ ಯಾವುದೇ ಯೋಜನೆ ಸರ್ಕಾರದ ಮುಂದೆ ಇಲ್ಲ ಎಂದು ಅವರು ಶುಕ್ರವಾರ ಹೇಳಿದ್ದಾರೆ.
ಇಸ್ಲಾಂ ಅವರು, “ಬಾಂಗ್ಲಾದೇಶದಲ್ಲಿ ಹಿಂದೂಗಳು ಸುರಕ್ಷಿತವಾಗಿದ್ದಾರೆ. ಉನ್ನತ ಮಟ್ಟದಲ್ಲಿ ತಪ್ಪು ಮಾಹಿತಿಯ ಪ್ರಚಾರ ನಡೆಯುತ್ತಿದೆ. ಸತ್ಯ ತಿಳಿಯಲು ನೀವು ಸ್ಥಳೀಯ ಮಟ್ಟಕ್ಕೆ ಬರಲು ನಾನು ವಿನಂತಿಸುತ್ತೇನೆ… ಬಾಂಗ್ಲಾದೇಶವು ಆರಂಭಿಕ ಕೆಲವು ದಿನಗಳಲ್ಲಿ ಹಿಂಸಾಚಾರಕ್ಕೆ ಸಾಕ್ಷಿಯಾಗಿತ್ತು. ಆದರೆ ಈಗ ಪರಿಸ್ಥಿತಿ ನಿಯಂತ್ರಣದಲ್ಲಿದೆ” ಎಂದರು.