ರಿಲಯನ್ಸ್ ಇಂಡಸ್ಟ್ರೀಸ್ ಮುಖ್ಯಸ್ಥ ಮುಖೇಶ್ ಅಂಬಾನಿ ಅವರ ಕಿರಿಯ ಪುತ್ರ ಅನಂತ್ ಅಂಬಾನಿ 2ನೇ ಪ್ರೀ ವೆಡ್ಡಿಂಗ್ ಸಂಭ್ರಮ ಇತ್ತೀಚಿಗಷ್ಟೇ ಅದ್ಧೂರಿಯಾಗಿ ನಡೆದಿತ್ತು. ಈ ಸಮಾರಂಭದಲ್ಲಿ ರಾಧಿಕಾ ಮರ್ಚೆಂಟ್ ಒಂದು ವಿಶೇಷವಾದ ಗೌನ್ ತೊಟ್ಟಿದ್ದು, ಸದ್ಯ ಸಾಮಾಜಿಕ ಜಾಲತಾಣದಲ್ಲಿ ಚರ್ಚೆಗೆ ಕಾರಣವಾಗಿದೆ.
ಬಾಲ್ಯದ ಸ್ನೇಹಿತರಾಗಿದ್ದ ಅನಂತ್ ಹಾಗೂ ರಾಧಿಕಾ ಹಲವು ವರ್ಷಗಳಿಂದ ಪರಸ್ಪರ ಪ್ರೀತಿಸುತ್ತಿದ್ದಾರೆ. ಅನಂತ್ ಅಂಬಾನಿ ಹಲವಾರು ಆರೋಗ್ಯ ಸಮಸ್ಯೆಗಳನ್ನು ಎದುರಿಸಿದ್ದರು, ಈ ಎಲ್ಲಾ ಸಂದರ್ಭದಲ್ಲಿ ರಾಧಿಕಾ ಜೊತೆಯಾಗಿದ್ದರು. ಇದೀಗ ರಾಧಿಕಾ ತಮ್ಮ 2ನೇ ಪ್ರೀ ವೆಡ್ಡಿಂಗ್ ಕಾರ್ಯಕ್ರಮದಲ್ಲಿ ಅನಂತ್ ಅಂಬಾನಿ ನೀಡಿದ್ದ ಲವ್ ಲೆಟರನ್ನೇ ಪ್ರಿಂಟ್ ಮಾಡಿಸಿದ ಗೌನ್ ತೊಟ್ಟು ಮಿಂಚಿದ್ದಾರೆ.