ಮುಂಬೈ: ರಿಲಯನ್ಸ್ ಇಂಡಸ್ಟ್ರೀಸ್ ಅಧ್ಯಕ್ಷ ಮುಕೇಶ್ ಅಂಬಾನಿ ಹಾಗೂ ನೀತಾ ಅಂಬಾನಿಯವರ ಕಿರಿಯ ಪುತ್ರ ಅನಂತ್ ಅಂಬಾನಿ ಹಾಗೂ ರಾಧಿಕಾ ಮರ್ಚೆಂಟ್ ವಿವಾಹ ಅದ್ಧೂರಿಯಾಗಿ ನಡೆಯುತ್ತಿದೆ.
ಮುಂಬೈನ ಜಿಯೋ ವರ್ಲ್ಡ್ ಕನ್ವೆನ್ಷನ್ ಸೆಂಟರ್‌ನಲ್ಲಿ ಅಂಬಾನಿ ಪುತ್ರನ ವಿವಾಹ ಅದ್ಧೂರಿಯಾಗಿ ನಡೆಯುತ್ತಿದೆ. ನ ಭೂತೋ ನ ಭವಿಷ್ಯತಿ ಎನ್ನುವಂತೆ ಅನಂತ್ ಅಂಬಾನಿ, ರಾಧಿಕಾ ಮರ್ಚೆಂಟ್ ವಿವಾಹ ನಡೆಯುತ್ತಿದೆ. ಮುಂಬೈನಲ್ಲಿ ವಿಶ್ವದ ಗಣ್ಯಾತಿಗಣ್ಯರೆಲ್ಲ ನೆರೆದಿದ್ದಾರೆ. ಇನ್ನು ವಿಶೇಷ ಅತಿಥಿಗಳಿಗೆ ನೂರಲ್ಲ, ಇನ್ನೂರಲ್ಲ ಬರೋಬ್ಬರಿ 2500 ರೀತಿಯ ವಿಶೇಷ ಖಾದ್ಯಗಳನ್ನು ಉಣ ಬಡಿಸಲಾಗುತ್ತಿದೆ.