ನಟಿ ರೂಪಾಲಿ ಗಂಗೂಲಿ ಇಂದು ಬಿಜೆಪಿಗೆ ಸೇರ್ಪಡೆಯಾಗಿದ್ದಾರೆ. ಪ್ರಧಾನಿ ಮೋದಿಯವರ ಅಭಿವೃದ್ಧಿ ಕಾರ್ಯಗಳನ್ನು ನೋಡಿ ಅವರ ಜತೆ ನಾನೂ ಕೈಜೋಡಿಸಬೇಕೆಂಬ ಹೆಬ್ಬಯಕೆಯಿಂದ ಬಿಜೆಪಿಗೆ ಸೇರ್ಪಡೆಯಾಗಿದ್ದೇನೆ, ಒಳ್ಳೆಯ ಕೆಲಸಗಳನ್ನು ಮಾಡುವಂತೆ ನನಗೆ ಆಶೀರ್ವಾದ ಮಾಡಿ ಎಂದು ಕೇಳಿಕೊಂಡಿದ್ದಾರೆ.
ಮಾರ್ಚ್ನಲ್ಲಿ ರೂಪಾಲಿ ಪ್ರಧಾನಿ ಮೋದಿಯವರನ್ನು ಭೇಟಿಯಾಗಿದ್ದರು, ಬಳಿಕ ಇದು ನನ್ನ ಜೀವನದ ಅತ್ಯಂತ ಸ್ಮರಣೀಯ ದಿನ, ಎಂದೂ ಮರೆಯಲು ಸಾಧ್ಯವಾಗದು, ಮೋದಿಯವರನ್ನು ಭೇಟಿಯಾಗುವ ಕನಸು ನನಸಾಯಿತು ಎಂದು ಬರೆದಿದ್ದರು.