ಅಮೆರಿಕ : “ನನ್ನನ್ನು ಅಮೆರಿಕ ಅಧ್ಯಕ್ಷನನ್ನಾಗಿ ಆಯ್ಕೆ ಮಾಡದಿದ್ದರೆ ರಕ್ತಪಾತವಾಗುವುದು” ಎಂದು ಅಮೆರಿಕ ಮಾಜಿ ಅಧ್ಯಕ್ಷ ಡೊನಾಲ್ಡ್ ಟ್ರಂಪ್(Donald Trump) ಎಚ್ಚರಿಕೆ ನೀಡಿದ್ದಾರೆ. ಆದರೆ, ಟ್ರಂಪ್ ಅವರ ಈ ಹೇಳಿಕೆಯ ಒಳಾರ್ಥವೇನು ಎಂಬುದು ಸದ್ಯಕ್ಕೆ ಸ್ಪಷ್ಟವಾಗಿಲ್ಲ. ವಾಸ್ತವವಾಗಿ, ಅವರು ಈ ಎಚ್ಚರಿಕೆಯನ್ನು ನೀಡಿದ ಸಮಯದಲ್ಲಿ, ಆಟೋಮೊಬೈಲ್ ಉದ್ಯಮದ ಬಗ್ಗೆ ಮಾತನಾಡುತ್ತಿದ್ದರು.
ನವೆಂಬರ್‌ನಲ್ಲಿ ನಡೆಯಲಿರುವ ಅಧ್ಯಕ್ಷೀಯ ಚುನಾವಣೆಯು ಅಮೆರಿಕ ಇತಿಹಾಸದಲ್ಲಿ ಅತ್ಯಂತ ಪ್ರಮುಖ ದಿನ ಎಂದು ಹೇಳಿದರು. ರಿಪಬ್ಲಿಕನ್ ಅಭ್ಯರ್ಥಿಯಾಗಿ ತಮ್ಮ ಸ್ಥಾನವನ್ನು ಭದ್ರಪಡಿಸಿಕೊಂಡ ಕೆಲವು ದಿನಗಳ ನಂತರ ಈ ಹೇಳಿಕೆ ಹೊರ ಬಂದಿದ್ದು, ಒಂದೊಮ್ಮೆ ನಾನು ಅಧ್ಯಕ್ಷನಾಗಿ ನೇಮಕವಾಗದಿದ್ದರೆ ಇಲ್ಲಿ ರಕ್ತಪಾತ ಖಚಿತ ಎಂದಿದ್ದಾರೆ.