ನವದೆಹಲಿ: ಪ್ರಧಾನ ಮಂತ್ರಿ ನರೇಂದ್ರ ಮೋದಿ ಇತ್ತೀಚೆಗೆ ಅಯೋಧ್ಯೆಗೆ ಭೇಟಿ ನೀಡಿದ್ದರು. ರೈಲ್ವೆ ನಿಲ್ದಾಣ, ಹೊಸ ವಿಮಾನ ನಿಲ್ದಾಣವನ್ನು ಉದ್ಘಾಟಿಸಿದ್ದರು.
ಪ್ರಧಾನಿ ಮೋದಿ ಅಯೋಧ್ಯೆಯ ಉಜ್ವಲ ಫಲಾನುಭವಿ ಮೀರಾ ಮಾಂಝಿ ಎಂಬ ಮಹಿಳೆ ಮನೆಗೆ ಭೇಟಿ ನೀಡಿ ಟೀ ಕುಡಿದು, ಅವರ ಕುಟುಂಬ ಸದಸ್ಯರನ್ನು ಭೇಟಿ ಮಾಡಿದ್ದರು.
ಪ್ರಧಾನಿ ಮೋದಿ ಅವರು ಪತ್ರ ಬರೆದು 2024 ರ ಹೊಸ ವರ್ಷಕ್ಕೆ ಮೀರಾ ಮಾಂಝಿ ಮತ್ತು ಅವರ ಎಲ್ಲಾ ಕುಟುಂಬ ಸದಸ್ಯರಿಗೆ ಶುಭಾಶಯ ಕೋರಿದ್ದಾರೆ. ಪ್ರಧಾನಿಯವರು ಇಡೀ ಕುಟುಂಬಕ್ಕೆ ಉಡುಗೊರೆಗಳನ್ನು ಕಳುಹಿಸಿದ್ದಾರೆ.