ಜನವರಿ 21 ರ ಸಂಜೆ 6 ರಿಂದ ಜನವರಿ 23 ಬೆಳಗ್ಗೆ 9 ಗಂಟೆಯವರೆಗೆ ಧಾರವಾಡ ಜಿಲ್ಲೆಯಾದ್ಯಂತ ಮದ್ಯ ಮಾರಾಟ ಹಾಗೂ ಸಾಗಾಟ ನಿಷೇಧಿಸಿ ಆದೇಶಿಸಲಾಗಿದೆ
ಅಯೋಧ್ಯೆಯ ರಾಮಲಲ್ಲಾ ಪ್ರಾಣ ಪ್ರತಿಷ್ಠಾಪನೆ ಹಿನ್ನೆಲೆಯಲ್ಲಿ ರಾಜ್ಯದ ಈ ಜಿಲ್ಲೆಗಳಲ್ಲಿ ಮದ್ಯ ಮಾರಾಟ ನಿಷೇಧಿಸಲಾಗಿದೆ.
ಅಬಕಾರಿ ಕಾಯ್ದೆ 1965 ರ ಕಲಂ 21 (1) ಪ್ರಕಾರ ಧಾರವಾಡ ಜಿಲ್ಲಾಧಿಕಾರಿ ಗುರುದತ್ ಹೆಗಡೆ ಆದೇಶ ಪ್ರಕಟಿಸಿದ್ದಾರೆ. ಯಾವುದೇ ಅಹಿತಕರ ಘಟನೆ ನಡೆಯದಂತೆ ಮುಂಜಾಗ್ರತಾ ಕ್ರಮ ಕೈಗೊಳ್ಳುವ ಸಲುವಾಗಿ ಈ ನಿರ್ಧಾರ ಕೈಗೊಳ್ಳಲಾಗಿದೆ.
ಆಯೋಧ್ಯೆ ರಾಮಮಂದಿರ ಉದ್ಘಾಟನೆ ಹಿನ್ನೆಲೆಯಲ್ಲಿ ಮಂಗಳೂರು ನಗರದಾದ್ಯಂತ ಪೊಲೀಸರು ಕಟ್ಟೆಚ್ಚರ ವಹಿಸಿದ್ದಾರೆ. ಯಾವುದೇ ಅಹಿತಕರ ಘಟನೆ ನಡೆಯದಂತೆ ಮುನ್ನೆಚ್ಚರಿಕಾ ಕ್ರಮ ವಹಿಸಲಾಗಿದೆ
ಜನವರಿ 21ರ ಮಧ್ಯರಾತ್ರಿಯಿಂದ 23 ರ ಮುಂಜಾನೆವರೆಗೆ ಮದ್ಯ ಮಾರಾಟ ಬಂದ್ ಮಾಡುವಂತೆ ಜಿಲ್ಲಾಧಿಕಾರಿಗೆ ಪ್ರಸ್ತಾವನೆ ನೀಡಲಾಗಿದೆ
ರಾಮ ಮಂದಿರದಲ್ಲಿ ಬಾಲ ರಾಮನ ಪ್ರಾಣ ಪ್ರತಿಷ್ಠಾಪನೆಯ ದಿನ ಯಾವುದೇ ಅಹಿತಕರ ಘಟನೆ ನಡೆಯದಂತೆ ಮುಂಜಾಗೃತಾ ಕ್ರಮ ವಹಿಸಲಾಗಿದೆ.
96 ಕಡೆ ಧಾರ್ಮಿಕ ಕಾರ್ಯಕ್ರಮ ಸ್ಥಳ ಗುರುತು ಮಾಡಲಾಗಿದೆ. ಮಂಗಳೂರು ನಗರದಲ್ಲಿ 131 ಸೂಕ್ಷ್ಮ ಪ್ರದೇಶ ಗುರುತು ಮಾಡಲಾಗಿದ್ದು, 57 ಸೆಕ್ಟರ್ ಮೊಬೈಲ್ ಸ್ವ್ಕಾಡ್ ಹಗಲು ರಾತ್ರಿ ಗಸ್ತು, 14 ಚೆಕ್ ಪಾಯಿಂಟ್, 9 ಸಿಎಆರ್, 3 ಕೆಎಸ್ಆರ್ಪಿ ತುಕಡಿ ನಿಯೋಜನೆ ಮಾಡಲಾಗಿದೆ.