ದೆಹಲಿ: ದೆಹಲಿಯಲ್ಲಿ ನಡೆಯುತ್ತಿರುವ AI ಶೃಂಗಸಭೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ವಿರುದ್ಧ ದೇಶ ವಿದೇಶದ ಗಣ್ಯರ ಎದುರು ಶರ್ಟ್ ಬಿಚ್ಚಿ, ಅರೆಬೆತ್ತಲೆಯಾಗಿ ಪ್ರತಿಭಟನೆ ಮಾಡಿದ್ದವರ ವಿರುದ್ಧ ಕೇಸ್ ದಾಖಲಾಗಿದೆ.
ರಾಷ್ಟ್ರ ರಾಜಧಾನಿಯ ಭಾರತ ಎಐ ಇಂಪ್ಯಾಕ್ಟ್ ಶೃಂಗಸಭೆಯ ಸ್ಥಳವಾದ ಭಾರತ್ ಮಂಟಪದಲ್ಲಿ ಪ್ರತಿಭಟನೆ ನಡೆಸಿದ್ದಕ್ಕಾಗಿ ಭಾರತೀಯ ಯುವ ಕಾಂಗ್ರೆಸ್ ಕಾರ್ಯಕರ್ತರನ್ನು ದೆಹಲಿ ಪೊಲೀಸರು ಬಂಧಿಸಿದ್ದಾರೆ
ಸಾರ್ವಜನಿಕ ಸೇವಕನ ಕರ್ತವ್ಯ ನಿರ್ವಹಣೆಯಲ್ಲಿ ಅಡ್ಡಿಪಡಿಸುವುದು ಮತ್ತು ಕಾನೂನುಬದ್ಧ ಸಾರ್ವಜನಿಕ ಸುವ್ಯವಸ್ಥೆಯನ್ನು ಉಲ್ಲಂಘಿಸುವುದಕ್ಕೆ ಸಂಬಂಧಿಸಿ ನಾನ್ ಬೇಲೆಬಲ್ ಕೇಸ್ ದಾಖಲಿಸಿದ್ದಾರೆ.
