ಭಾರತದ ಹಿರಿಯ ಟೆನಿಸ್ ಆಟಗಾರ ರೋಹನ್ ಬೋಪಣ್ಣ ಆಸ್ಟ್ರೇಲಿಯಾ ಓಪನ್‌ನಲ್ಲಿ ಹೊಸ ಇತಿಹಾಸ ನಿರ್ಮಿಸಿದ್ದಾರೆ. 43 ವರ್ಷದ ಕನ್ನಡಿಗ ಬೋಪಣ್ಣ ತಮ್ಮ ಜೊತೆಗಾರ ಮ್ಯಾಥ್ಯೂ ಎಬ್ಡೆನ್ ಜೊತೆಗೂಡಿ ಆಸ್ಟ್ರೇಲಿಯನ್ ಓಪನ್-2024 ಪುರುಷರ ಡಬಲ್ಸ್ನಲ್ಲಿ ಚಾಂಪಿಯನ್ ಆಗಿ ಹೊರ ಹೊಮ್ಮಿದ್ದಾರೆ.
ಶನಿವಾರ ನಡೆದ ಆಸ್ಟ್ರೇಲಿಯನ್ ಓಪನ್‌ನ ಪುರುಷರ ಡಬಲ್ಸ್‌ನ ಫೈನಲ್‌ನಲ್ಲಿ ರೋಹನ್ ಬೋಪಣ್ಣ-ಮ್ಯಾಥ್ಯೂ ಎಬ್ಡೆನ್ ಜೋಡಿ 7-6 (7-0), 7-5 ರಲ್ಲಿ ಇಟಲಿಯ ಸಿಮೋನ್ ಬೊಲೆಲ್ಲಿ-ಆಂಡ್ರಿಯಾ ವವಸೋರಿ ಜೋಡಿಯನ್ನ ಮಣಿಸಿ ಚಾಂಪಿಯನ್ ಆಗಿದ್ದಾರೆ.
ಇದು ರೋಹನ್ ಬೋಪಣ್ಣ ಅವರ ವೃತ್ತಿ ಜೀವನದಲ್ಲಿ ಪುರುಷರ ಡಬಲ್ಸ್ನಲ್ಲಿ ಇದು ಮೊಟ್ಟ ಮೊದಲ ಗ್ರ್ಯಾಂಡ್ ಸ್ಲಾಮ್ ಪ್ರಶಸ್ತಿಯಾಗಿದೆ. ತಮ್ಮ 43 ನೇ ವಯಸ್ಸಿನಲ್ಲಿ ಈ ಪ್ರಶಸ್ತಿ ಗೆಲ್ಲುವ ಮೂಲಕ ಗ್ರ್ಯಾಂಡ್ ಸ್ಲಾಮ್ ಇತಿಹಾಸದಲ್ಲಿ ಚಾಂಪಿಯನ್ ಆದ ಹಿರಿಯ ಆಟಗಾರ ಎನಿಸಿಕೊಂಡಿದ್ದಾರೆ. ಈ ಮೂಲಕ ಏಜ್ ಇಸ್ ನಂಬರ್ ಎಂಬ ನಾಣ್ಣುಡಿಗೆ ಸಾಕ್ಷಿಯಾಗಿದ್ದಾರೆ.