ನವದೆಹಲಿ : ಇಟಲಿಯಲ್ಲಿ ನಡೆಯುತ್ತಿದೆ. ಪ್ರಧಾನಿ ನರೇಂದ್ರ ಮೋದಿ ಗುರುವಾರ ಇಟಲಿಯಲ್ಲಿ ನಡೆದ G7 ಔಟ್‌ರೀಚ್ ಶೃಂಗಸಭೆಯಲ್ಲಿ ಪೋಪ್ ಫ್ರಾನ್ಸಿಸ್ ಅವರನ್ನು ಸ್ವಾಗತಿಸಿದ್ದಾರೆ.
ಇಟಾಲಿಯನ್ ಪ್ರಧಾನಮಂತ್ರಿ ಜಾರ್ಜಿಯಾ ಮೆಲೋನಿ ( ಅವರೊಂದಿಗೆ ವೀಲ್ಚೇರ್ನಲ್ಲಿ ಪೋಪ್ ಫ್ರಾನ್ಸಿಸ್ ಅವರನ್ನು ಶೃಂಗಸಭೆಗೆ ಕರೆದೊಯ್ಯಲಾಯಿತು.
ಫ್ರಾನ್ಸ್‌ನ ಎಮ್ಯಾನುಯೆಲ್ ಮ್ಯಾಕ್ರನ್ ಮತ್ತು ಯುರೋಪಿಯನ್ ಪಾರ್ಲಿಮೆಂಟ್ ಮುಖ್ಯಸ್ಥ ಉರ್ಸುಲಾ ವಾನ್ ಡೆರ್ ಲೇಯೆನ್ ಸೇರಿದಂತೆ ಹಲವಾರು ನಾಯಕರು ಪೋಪ್ ಫ್ರಾನ್ಸಿಸ್ ಅವರನ್ನು ಸ್ವಾಗತಿಸಿದರು. ಪೋಪ್ ಫ್ರಾನ್ಸಿಸ್ ಬ್ರಿಟಿಷ್ ಪ್ರಧಾನಿ ರಿಷಿ ಸುನಕ್ ಅವರನ್ನು ಭೇಟಿ ಮಾಡಿದ ನಂತರ, ಅವರನ್ನು ಪಿಎಂ ನರೇಂದ್ರ ಮೋದಿ ಸ್ವಾಗತಿಸಿದರು. ಅವರು ಅಪ್ಪಿಕೊಂಡು ಮಾತನಾಡಿಸಿದ್ದಾರೆ.
G7 Summit: ಇಟಲಿಯಲ್ಲಿ ಜಿ7 ಶೃಂಗಸಭೆಯ ಔಟ್ರೀಚ್ ಅಧಿವೇಶನದಲ್ಲಿ ಪೋಪ್ ಫ್ರಾನ್ಸಿಸ್ ಅವರನ್ನು ಭೇಟಿಯಾದ ಪ್ರಧಾನಿ ನರೇಂದ್ರ ಮೋದಿ ಅಪ್ಪಿಕೊಂಡು ಮಾತನಾಡಿಸಿದ್ದಾರೆ. ಪ್ರಧಾನಮಂತ್ರಿ ಮೋದಿ ಬ್ರಿಟಿಷ್ ಪ್ರಧಾನಿ ರಿಷಿ ಸುನಕ್ ಅವರೊಂದಿಗೆ ಕೂಡ ಸಂವಾದ ನಡೆಸಿದ್ದಾರೆ.