ನವದೆಹಲಿ: ಲೋಕಸಭೆ ಚುನಾವಣೆ (Lok Sabha Election) ಹೊಸ್ತಿಲಲ್ಲಿ ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ (Delhi CM Arvind Kejriwal) ಇಡಿ ಬಂಧನಕ್ಕೊಳಗಾದ ಬೆನ್ನಲ್ಲೇ ಟಿಎಂಸಿ ನಾಯಕಿಯ ವಿರುದ್ಧ ಪ್ರಕರಣ ದಾಖಲಾಗಿದೆ. ಜಾರಿ ನಿರ್ದೇಶನಾಲಯ (ED) ತೃಣಮೂಲ ಕಾಂಗ್ರೆಸ್ ನಾಯಕಿ ಮಹುವಾ ಮೊಯಿತ್ರಾ (Mahua Moitra) ವಿರುದ್ಧ ಪ್ರಕರಣ ದಾಖಲಿಸಿದೆ.
ಅಕ್ರಮ ಹಣ ವರ್ಗಾವಣೆ ಸಂಬಂಧ ಈ ಪ್ರಕರಣವನ್ನು ದಾಖಲಿಸಲಾಗಿದೆ. ಸಂಸತ್ನಲ್ಲಿ ಕೇಂದ್ರ ಸರ್ಕಾರವನ್ನು ಗುರಿಯಾಗಿಸಿಕೊಂಡು ಪ್ರಶ್ನೆಗಳನ್ನು ಕೇಳಲು ಉಡುಗೊರೆಗಳನ್ನು ಪಡೆದಿರುವ ಆರೋಪದಲ್ಲಿ ಮಹುವಾ ಮೊಯಿತ್ರಾ ಅವರನ್ನು ಡಿಸೆಂಬರ್‌ನಲ್ಲಿ ಲೋಕಸಭೆಯಿಂದ ಹೊರಹಾಕಲಾಗಿದೆ.
ತನಿಖಾ ಸಂಸ್ಥೆ ಇತ್ತೀಚೆಗೆ ವಿದೇಶಿ ವಿನಿಮಯ ನಿರ್ವಹಣಾ ಕಾಯಿದೆ (FEMA) ಉಲ್ಲಂಘನೆ ಪ್ರಕರಣದಲ್ಲಿ ಪ್ರಶ್ನಿಸಲು ಹೊಸ ಸಮನ್ಸ್ ನೀಡಿತ್ತು. ವಿಚಾರಣೆಯನ್ನು ಮಹುವಾ ಮೊಯಿತ್ರಾ ತಪ್ಪಿಸಿಕೊಂಡಿದ್ದಾರೆ. ಅನಿವಾಸಿ ಬಾಹ್ಯ ಅಥವಾ ಎನ್‌ಆರ್‌ಇ ಖಾತೆಗೆ ಸಂಬಂಧಿಸಿದ ವಹಿವಾಟಿನ ಕುರಿತು ತನಿಖಾ ಸಂಸ್ಥೆ ಆಕೆಯನ್ನು ಪ್ರಶ್ನಿಸಲು ಬಯಸಿದೆ ಎಂದು ತಿಳಿಸಿವೆ.