ಬೆಂಗಳೂರು : ಗಣರಾಜ್ಯೋತ್ಸವದ ಪ್ರಯುಕ್ತ ರಾಷ್ಟ್ರಪತಿ ಪದಕ ಘೋಷಣೆ ಮಾಡಲಾಗಿದ್ದು, ಕರ್ನಾಟಕದ 21 ಪೊಲೀಸ್ ಅಧಿಕಾರಿಗಳು ರಾಷ್ಟ್ರಪತಿ ಪದಕಕ್ಕೆಭಾಜನರಾಗಿದ್ದಾರೆ. ಶುಕ್ರವಾರ 75ನೇ ಗಣರಾಜ್ಯೋತ್ಸವ ಸಮಾರಂಭ ವೇಳೆಗ ಪದಕ ಪ್ರದಾನ ಮಾಡಲಾಗುತ್ತದೆ. ವಿಶಿಷ್ಟ ಸೇವೆಗಾಗಿ ಎಡಿಜಿಪಿ ಸೌಮೇಂದ್ರ ಮುಖರ್ಜಿ ಹಾಗೂ ಡಿವೈಎಸ್ಪಿ ಸುಧೀರ್ ಮಹದೇವ್ ಹೆಗ್ಡೆಗೆ ರಾಷ್ಟ್ರಪತಿ ಪದಕ ಘೋಷಣೆಯಾಗಿದೆ
ಪೊಲೀಸ್ ಇನ್ಸ್ಪೆಕ್ಟರ್ ಮಾಸ್ತೇನಹಳ್ಳಿ ರಾಮಪ್ಪ ಹರೀಶ್, ಇನ್ಸ್ಪೆಕ್ಟರ್ ಸಣ್ಣ ರಂಗಪ್ಪ ವಿರೇಂದ್ರ ಪ್ರಸಾದ್, ಸಬ್ ಇನ್ಸ್ಪೆಕ್ಟರ್ ದಾದಾಪೀರ್ ಕಣ್ಣೂರ್ ಸಾಬ್ ಸೇರಿದಂತೆ ಕರ್ನಾಟಕ 21 ಪೊಲೀಸ್ ಅಧಿಕಾರಿಗಳಿಗೆ ಗಣರಾಜ್ಯೋತ್ಸವ ಪ್ರಯುಕ್ತ ರಾಷ್ಟ್ರಪತಿ ಪದಕ ಘೋಷಣೆಯಾಗಿದೆ.