ನವದೆಹಲಿ : ಆ್ಯಪ್ಗಳ ಮೂಲಕ ಹೂಡಿಕೆ ಹೆಸರಿನಲ್ಲಿ ಜನರಿಗೆ ವಂಚನೆ ಎಸಗಿದ ಪ್ರಕರಣಕ್ಕೆ (Online Fraud case) ಸಂಬಂಧಿಸಿ ತನಿಖೆ ನಡೆಸುತ್ತಿರುವ ಸಿಬಿಐ (CBI) ಬುಧವಾರ ಕರ್ನಾಟಕದ (Karnataka) ಕೆಲವು ಪ್ರದೇಶಗಳೂ ಸೇರಿದಂತೆ ದೇಶದ 30 ಕಡೆಗಳಲ್ಲಿ ದಾಳಿ ನಡೆಸಿದೆ.
ಕರ್ನಾಟಕ, ದೆಹಲಿ, ರಾಜಸ್ಥಾನ, ಉತ್ತರ ಪ್ರದೇಶ, ಬಿಹಾರ, ಮಧ್ಯಪ್ರದೇಶ, ಮಹಾರಾಷ್ಟ್ರ, ಒಡಿಶಾ, ಆಂಧ್ರ ಪ್ರದೇಶ, ತಮಿಳುನಾಡು ಮತ್ತು ಕರ್ನಾಟಕ ಸೇರಿದಂತೆ 10 ರಾಜ್ಯಗಳು / ಕೇಂದ್ರಾಡಳಿತ ಪ್ರದೇಶಗಳ 30 ಸ್ಥಳಗಳಲ್ಲಿ ದಾಳಿ ನಡೆಸಿ ಶೋಧ ಕಾರ್ಯ ನಡೆಸಲಾಗಿದೆ. ದಾಳಿ ವೇಳೆ ಮೊಬೈಲ್ ಫೋನ್ಗಳು, ಕಂಪ್ಯೂಟರ್ ಹಾರ್ಡ್ ಡಿಸ್ಕ್ಗಳು, ಸಿಮ್ ಕಾರ್ಡ್ಗಳು, ಎಟಿಎಂ ಕಾರ್ಡ್, ಇ-ಮೇಲ್ ದಾಖಲೆಗಳನ್ನು ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ.
ಎಚ್ಪಿಝಡ್ (HPZ) ಟೋಕನ್ ಆ್ಯಪ್ ಹಾಗೂ ಅದೇ ಮಾದರಿಯ ಹೂಡಿಕೆ ವಂಚನೆಯಲ್ಲಿ ಶಾಮೀಲಾಗಿದ್ದಾರೆ ಎಂಬ ಆರೋಪದ ಮೇಲೆ ಎರಡು ಖಾಸಗಿ ಕಂಪನಿಗಳು ಮತ್ತು ಅದರ ನಿರ್ದೇಶಕರ ವಿರುದ್ಧ ಸಿಬಿಐ ಪ್ರಕರಣ ದಾಖಲಿಸಿತ್ತು. ಈ ಪ್ರಕರಣದ ತನಿಖೆಗ ಭಾಗವಾಗಿ ಇಂದು ದಾಳಿ ನಡೆಸಿದೆ.