ನವದೆಹಲಿ: ದೆಹಲಿಯಲ್ಲಿ ಶೀತ ಹವಾಮಾನ ಮತ್ತು ವಾಯುಮಾಲಿನ್ಯದ ಪರಿಣಾಮಗಳಿಂದ ಕಾಂಗ್ರೆಸ್ ನಾಯಕಿ ಮತ್ತು ರಾಜ್ಯಸಭಾ ಸಂಸದೆ ಸೋನಿಯಾ ಗಾಂಧಿ ಅವರನ್ನು ಉಸಿರಾಟದ ತೊಂದರೆಯಿಂದಾಗಿ ಸರ್ ಗಂಗಾ ರಾಮ್ ಆಸ್ಪತ್ರೆಗೆ ದಾಖಲಿಸಲಾಗಿದೆ.
ಸೋನಿಯಾ ಗಾಂಧಿಯವರ ಶ್ವಾಸನಾಳದ ಆಸ್ತಮಾ ಸ್ವಲ್ಪಮಟ್ಟಿಗೆ ಉಲ್ಬಣಗೊಂಡಿದೆ , ಅವರು ಚಿಕಿತ್ಸೆಗೆ ಉತ್ತಮವಾಗಿ ಸ್ಪಂದಿಸುತ್ತಿದ್ದಾರೆ ಎಂದು ತಿಳಿದು ಬಂದಿದೆ.
ಮುನ್ನೆಚ್ಚರಿಕೆ ಕ್ರಮವಾಗಿ, ವೈದ್ಯರು ಅವರನ್ನು ವೀಕ್ಷಣೆ ಮತ್ತು ಹೆಚ್ಚಿನ ವೈದ್ಯಕೀಯ ನಿರ್ವಹಣೆಗಾಗಿ ಆಸ್ಪತ್ರೆಗೆ ದಾಖಲಿಸಲು ನಿರ್ಧರಿಸಿದರು.
