ಅಲ್ವಾರ್ : ಅಲ್ವಾರ್ ಬಳಿ ಮಂಗಳವಾರ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಕಾಂಗ್ರೆಸ್ ನಾಯಕ ಮನ್ವೇಂದ್ರ ಸಿಂಗ್ ಜಸೋಲ್ಅ ವರ ಪತ್ನಿ ಚಿತ್ರಾ ಸಿಂಗ್ ಸಾವಿಗೀಡಾಗಿದ್ದಾರೆ. ಅಪಘಾತದ ಸಂದರ್ಭದಲ್ಲಿ ಹಿರಿಯ ಕಾಂಗ್ರೆಸ್ ನಾಯಕ ಮತ್ತು ಅವರ ಪುತ್ರ ಸೋಲಂಕಿ ಸಿಂಗ್ ಕೂಡ ಕಾರಿನಲ್ಲಿದ್ದರು. ಇವರಿಬ್ಬರಿಗೆ ತೀವ್ರವಾಗಿ ಗಾಯಗಳಾಗಿದ್ದು ಆಸ್ಪತ್ರೆಗೆ ದಾಖಲಿಸಲಾಗಿದೆ.
ಕಾಂಗ್ರೆಸ್ ನಾಯಕ ತನ್ನ ಕುಟುಂಬದೊಂದಿಗೆ ದೆಹಲಿಯಿಂದ ಜೈಪುರಕ್ಕೆ ಪ್ರಯಾಣಿಸುತ್ತಿದ್ದಾಗ ರಸ್ತೆ ಅಪಘಾತ ಸಂಭವಿಸಿದ್ದು, ಗಾಯಾಳುಗಳು ಅಪಾಯದಿಂದ ಪಾರಾಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ಮನ್ವೇಂದ್ರ ಸಿಂಗ್ ಜಸೋಲ್ ಅವರು ಅಟಲ್ ಬಿಹಾರಿ ವಾಜಪೇಯಿ ನೇತೃತ್ವದ ಸರ್ಕಾರದಲ್ಲಿ ಕಳೆದ ಎರಡು ವರ್ಷಗಳಿಂದ ಕೇಂದ್ರ ಹಣಕಾಸು ಸಚಿವರಾಗಿ ಸೇವೆ ಸಲ್ಲಿಸಿದ ಮಾಜಿ ಬಿಜೆಪಿ ನಾಯಕ ಜಸ್ವಂತ್ ಸಿಂಗ್ ಜಸೋಲ್ ಅವರ ಪುತ್ರರಾಗಿದ್ದಾರೆ.