ಚೀನಾದ ರೆಸ್ಟೋರೆಂಟ್ನಲ್ಲಿ ಸಂಭವಿಸಿದ ಸ್ಫೋಟದಲ್ಲಿ ಓರ್ವ ಸಾವನ್ನಪ್ಪಿದ್ದು, 20ಕ್ಕೂ ಅಧಿಕ ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ. ಚೀನಾದ ರೆಸ್ಟೋರೆಂಟ್ನಲ್ಲಿ ಸಂಭವಿಸಿದ ಸ್ಫೋಟದಲ್ಲಿ ಓರ್ವ ಸಾವನ್ನಪ್ಪಿದ್ದು, 20ಕ್ಕೂ ಅಧಿಕ ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ.
ಚೀನಾದ ಉತ್ತರದ ಪಟ್ಟಣವೊಂದರಲ್ಲಿ ಭಾರಿ ಸ್ಫೋಟ ಸಂಭವಿಸಿದೆ. ಹೆಬೈ ಪ್ರಾಂತ್ಯದಲ್ಲಿ ಈ ಘಟನೆ ನಡೆದಿದೆ ಎನ್ನಲಾಗಿದೆ. ಘಟನೆಯಲ್ಲಿ ಒಬ್ಬರು ಸಾವನ್ನಪ್ಪಿದ್ದು, 22 ಮಂದಿ ಗಾಯಗೊಂಡಿದ್ದಾರೆ. ರಾಜಧಾನಿ ಬೀಜಿಂಗ್ನಿಂದ ಪೂರ್ವಕ್ಕೆ 50 ಕಿ.ಮೀಗೂ ಕಡಿಮೆ ದೂರದಲ್ಲಿರುವ ಸಾನ್ಹೆ ನಗರದ ವಸತಿ ಪ್ರದೇಶದಲ್ಲಿ ಸ್ಫೋಟ ಸಂಭವಿಸಿದೆ.
ಈ ಸ್ಫೋಟಕ್ಕೆ ಫ್ರೈಡ್ ಚಿಕನ್ ಅಂಗಡಿಯಲ್ಲಿ ಅನಿಲ ಸೋರಿಕೆ ಕಾರಣ ಎಂದು ಶಂಕಿಸಲಾಗಿದೆ. ಘಟನಾ ಸ್ಥಳಕ್ಕೆ 36 ತುರ್ತು ವಾಹನಗಳು ಮತ್ತು 154 ಸಿಬ್ಬಂದಿಯನ್ನು ರವಾನಿಸಲಾಗಿದೆ. ನಗರದ ಲಾಂಗ್ಫಾಂಗ್ ಅಗ್ನಿಶಾಮಕ ಇಲಾಖೆ ತಿಳಿಸಿದೆ. ಬೆಂಕಿಯನ್ನು ನಿಯಂತ್ರಣಕ್ಕೆ ತರಲಾಗಿದೆ, ಬೆಳಗಿನ ಸಮಯದಲ್ಲಿ ಅತಿ ಹೆಚ್ಚು ಜನ ಸಂಖ್ಯೆ ಇರುವ ನಗರವು ಸ್ಫೋಟದಿಂದಾಗಿ ದಟ್ಟಹೊಗೆಯಿಂದ ಆವೃತವಾಗಿತ್ತು.