ಬೆಂಗಳೂರು: ರಾಜ್ಯದಲ್ಲಿ ಮುಂಗಾರು ಮಳೆ ಚುರುಕು ಪಡೆಯುತ್ತಿದ್ದು, ಅರಬ್ಬೀ ಸಮುದ್ರ ಮತ್ತು ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತದ ಹಿನ್ನೆಲೆಯಲ್ಲಿ ಜುಲೈ 17 ಮತ್ತು 18ರಂದು ಭಾರೀ ಮಳೆಯ ಎಚ್ಚರಿಕೆಯನ್ನು ನೀಡಲಾಗಿದೆ.
ಜುಲೈ 17 ಮತ್ತು 18 ರಂದು ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳಿಗೆ ದಕ್ಷಿಣ ಒಳನಾಡಿನ ಚಿಕ್ಕಮಗಳೂರು, ಶಿವಮೊಗ್ಗ, ಹಾಸನ ಜಿಲ್ಲೆಗಳಿಗೆ ರೆಡ್ ಅಲರ್ಟ್ ಘೋಷಣೆ ಮಾಡಲಾಗಿದೆ. ಜುಲೈ 19ರಿಂದ ಕರಾವಳಿ ಜಿಲ್ಲೆಗಳು ಹಾಗೂ ಚಿಕ್ಕಮಗಳೂರು, ಶಿವಮೊಗ್ಗ, ಹಾಸನ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಣೆ ಮಾಡಲಾಗಿದೆ.