ನವದೆಹಲಿ : ಪ್ರತ್ಯೇಕ ರಾಷ್ಟ್ರದ ಬೇಡಿಕೆ ಕುರಿತು ಡಿಕೆ ಹೇಳಿಕೆಯನ್ನೇ ಅಸ್ತ್ರ ಮಾಡಿಕೊಂಡು ಬಿಜೆಪಿ ಕರ್ನಾಟಕದಲ್ಲಿ ಪ್ರತಿಭಟನೆ ಮಾಡಿದ್ದು, ಅದನ್ನೇ ಅಸ್ತ್ರವನ್ನಾಗಿ ಮಾಡಿಕೊಂಡು ಕಾಂಗ್ರೆಸ್ ವಿರುದ್ಧ ಬಿಜೆಪಿ ನಾಯಕರು ಹರಿಹಾಯುತ್ತಿದ್ದಾರೆ.
ಪ್ರಧಾನಿ ನರೇಂದ್ರ ಮೋದಿ ಅವರು ಸಹ ಇಂದು (ಸೋಮವಾರ) ಈ ಬಾರಿ ಲೋಕಸಭೆಯ ಕೊನೆಯ ಭಾಷಣದಲ್ಲಿ ಸಂಸದ ಡಿಕೆ ಸುರೇಶ್(DK Suresh) ಪ್ರತ್ಯೇಕ ರಾಷ್ಟ್ರ ಹೇಳಿಕೆಯನ್ನು ಪ್ರಸ್ತಾಪಿಸಿ, ಬಹಿರಂಗವಾಗಿ ದೇಶ ಒಡೆಯುವ ಬಗ್ಗೆ ಮಾತನಾಡುತ್ತಿದ್ದಾರೆ. ಒಗ್ಗೂಡಿಸುವುದು ಇರಲಿ. ಒಡೆಯುವ ಬಗ್ಗೆ ಮಾತನಾಡುತ್ತಿದ್ದಾರೆ ಎಂದು ವಾಗ್ದಾಳಿ ನಡೆಸಿದ್ದಾರೆ.