ತಮಿಳು ಸೂಪರ್ ಸ್ಟಾರ್ ವಿಶಾಲ್ ರಾಜಕೀಯಕ್ಕೆ ಎಂಟ್ರಿಕೊಡುವುದಾಗಿ ತಿಳಿಸಿದ್ದಾರೆ. ಯಾವುದೇ ಪಕ್ಷದಲ್ಲಿ ಸೇರದೇ ತಾವೇ ರಾಜಕೀಯ ಪಕ್ಷ ಸ್ಥಾಪಿಸುವುದಾಗಿಯೂ ಘೋಷಿಸಿದ್ದಾರೆ. 2026ರಲ್ಲಿ ತಮಿಳುನಾಡು ರಾಜ್ಯದಲ್ಲಿ ನಡೆಯಲಿರುವ ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧಿಸುತ್ತೇನೆಂದು ತಿಳಿಸಿದ್ದಾರೆ.
ರಾಜಕೀಯ ಪ್ರವೇಶದ ಭಾಗವಾಗಿ ಪಕ್ಷ ಸ್ಥಾಪಿಸುವುದಾಗಿಯೂ ಮಾಧ್ಯಮಗೋಷ್ಠಿಯಲ್ಲಿ ತಿಳಿಸಿದ್ದಾರೆ. ರಾಜ್ಯದ ಜನತೆ ಸಮಸ್ಯೆ ಅಥವಾ ಸೂಕ್ತ ಸೌಲಭ್ಯಗಳ ಕೊರತೆ ಎದುರಿಸುತ್ತಿದ್ದಾರೆ. ಅವುಗಳನ್ನು ಪರಿಹರಿಸಲು ರಾಜಕೀಯ ಪ್ರವೇಶ ನಿಶ್ಚಿತ ಎಂದಿದ್ದಾರೆ