ಮಂಗಳೂರು: ಜನವರಿ 29ರಿಂದ ಫೆಬ್ರವರಿ 2 ರವರೆಗೆ ತುಳು ಭಾಷೆಯ ಅಧಿಕೃತ ಸ್ಥಾನಮಾನಕ್ಕಾಗಿ ವಿಶಿಷ್ಟ ಅಭಿಯಾನ ಕೈಗೊಳ್ಳಲಾಗಿದೆ.
ತುಳು ಭಾಷೆಯನ್ನು 8ನೇ ಪರಿಚ್ಛೇದಕ್ಕೆ ಸೇರ್ಪಡೆ ಹಾಗೂ ರಾಜ್ಯದಲ್ಲಿ ಎರಡನೇ ಅಧಿಕೃತ ಭಾಷೆ ಸ್ಥಾನಮಾನ ನೀಡಬೇಕೆನ್ನುವುದು ಹೋರಾಟಗಾರರ ಪ್ರಮುಖ ಬೇಡಿಕೆಯಾಗಿದೆ.
ಕಾರ್ಯಕ್ರಮದ ಅಂಗವಾಗಿ ಪ್ರಧಾನ ಮಂತ್ರಿ ನರೇಂದ್ರ ಮೋದಿ ಹಾಗೂ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ 10 ಸಾವಿರ ಪತ್ರಗಳನ್ನು ಬರೆಯಲು ನಿರ್ಧರಿಸಲಾಗಿದೆ.
ವಿವಿಧ ಕ್ಷೇತ್ರದ ಗಣ್ಯರು, ರಾಜಕಾರಣಿಗಳು, ಕಲಾವಿದರು, ವಿವಿಧ ಸಂಘ ಸಂಸ್ಥೆಗಳು ಈ ಅಭಿಯಾನದಲ್ಲಿ ಪಾಲ್ಗೊಳ್ಳಲಿದೆ. ಈ ಅಭಿಯಾನಕ್ಕೆ ಪಕ್ಷ ಭೇದ ಮರೆತು ಜನ ಬೆಂಬಲಿಸಿದ್ದಾರೆ. ಕರಾವಳಿ ಭಾಗದ ಕನ್ನಡ ಸಂಘಟನೆಗಳು ಕೂಡಾ ಈ ಅಭಿಯಾನದಲ್ಲಿ ಕೈ ಜೋಡಿಸುವುದಾಗಿ ತಿಳಿಸಿದೆ.