ನವದೆಹಲಿ: ಸಿಎಂ ಕೆ.ಚಂದ್ರಶೇಖರ ರಾವ್ಗೆ 48 ಗಂಟೆಗಳ ಕಾಲ ಚುನಾವಣಾ ಪ್ರಚಾರ ಮಾಡದಂತೆ ಭಾರತೀಯ ಚುನಾವಣಾ ಆಯೋಗ ನಿಷೇಧ ಹೇರಿದೆ. ಇಂದು ರಾತ್ರಿ 8 ಗಂಟೆಯಿಂದ ಮುಂದಿನ 48 ಗಂಟೆಗಳ ಕಾಲ ನಿಷೇಧಾಜ್ಞೆ ಜಾರಿಯಲ್ಲಿ ಇರಲಿದೆ.
ಭಾರತ್ ರಾಷ್ಟ್ರ ಸಮಿತಿ ಅಧ್ಯಕ್ಷರೂ ಆಗಿರುವ ಕೆಸಿಆರ್ ಅವರು ಕಾಂಗ್ರೆಸ್ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ್ದಕ್ಕಾಗಿ ನಿಷೇಧ ಹೇರಲಾಗಿದೆ.
ಲೋಕಸಭಾ ಚುನಾವಣೆಗೆ ಸಂಬಂಧಿಸಿದಂತೆ ಯಾವುದೇ ಸಾರ್ವಜನಿಕ ಸಭೆಗಳು, ಸಾರ್ವಜನಿಕ ಮೆರವಣಿಗೆಗಳು, ಸಾರ್ವಜನಿಕ ರ್ಯಾಲಿಗಳು, ಪ್ರದರ್ಶನಗಳು, ಸಂದರ್ಶನಗಳು ಮತ್ತು ಮಾಧ್ಯಮಗಳಲ್ಲಿ ಹೇಳಿಕೆಗಳನ್ನು ನೀಡದಂತೆ ನಿರ್ಬಂಧಿಸಲಾಗಿದೆ. ಕ್ರಮ ಕೈಗೊಂಡ ಬಳಿಕ ಆಕ್ಷೇಪಾರ್ಹ ಹೇಳಿಕೆಗಳನ್ನು ಬಲವಾಗಿ ಖಂಡಿಸುತ್ತೇವೆ ಎಂದು ಚುನಾವಣಾ ಆಯೋಗ ತಿಳಿಸಿದೆ.