ಚಿತ್ರದುರ್ಗ: ರೇಣುಕಾಸ್ವಾಮಿ (Renukaswamy) ಹತ್ಯೆ ಪ್ರಕರಣದಲ್ಲಿ ಪೊಲೀಸ್ ಕಸ್ಟಡಿಯಲ್ಲಿದ್ದ (Police Custody) ನಟ ದರ್ಶನ್ (Darshan) ಹಾಗೂ ಇತರೆ ನಾಲ್ವರನ್ನ ಇಂದು ಬೆಂಗಳೂರಿನ 24ನೇ ಎಸಿಎಂಎಂ ನ್ಯಾಯಾಲಯದ ಮುಂದೆ ಹಾಜರುಪಡಿಸಲಾಗಿದ್ದು, ಕೋರ್ಟ್ ಜುಲೈ 4ರವರೆಗೆ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿ ಆದೇಶ ಹೊರಡಿಸಿದೆ.
ದರ್ಶನ್ ಜೊತೆ ವಿನಯ್, ಪ್ರದೋಶ್ ಹಾಗೂ ಧನರಾಜ್‌ಗೆ 14 ದಿನಗಳ ನ್ಯಾಯಾಂಗ ಬಂಧನ ವಿಧಿಸಿದೆ. ಈಗಾಗಲೇ ಪವಿತ್ರಾ ಸೇರಿ 9 ಆರೋಪಿಗಳಿಗೆ ಪರಪ್ಪನ ಅಗ್ರಹಾರಕ್ಕೆ ಕಳುಹಿಸಲಾಗಿದೆ.
ದರ್ಶನ್ ಜೈಲುಪಾಲಾದ ಹಿನ್ನಲೆಯಲ್ಲಿ ರೇಣುಕಾಸ್ವಾಮಿ ತಂದೆ ಪ್ರತಿಕ್ರಿಯಿಸಿದ್ದು, ಪೊಲೀಸ್ ಹಾಗೂ ವಕೀಲರಿಗೆ ಧನ್ಯವಾದ ತಿಳಿಸಿದ್ದಾರೆ.