ನವದೆಹಲಿ : ಶುಕ್ರವಾರ, ಜೂನ್ 28 ರಂದು, ದೆಹಲಿಯ ಇಂದಿರಾಗಾಂಧಿ ಅಂತರಾಷ್ಟ್ರೀಯ ವಿಮಾನ ನಿಲ್ದಾಣದ ಟರ್ಮಿನಲ್-1ರ ಮೇಲ್ಛಾವಣಿ ಕುಸಿದಿದೆ. ಹಲವು ವಾಹನಗಳು ಇದರಿಂದ ಜಖಂಗೊಂಡಿವೆ. ಈ ಅಪಘಾತದಿಂದಾಗಿ ವಿಮಾನಗಳ ಹಾರಾಟಕ್ಕೆ ತೊಂದರೆಯಾಗಿದೆ. ಇದುವರೆಗೆ ಒಟ್ಟು 28 ವಿಮಾನಗಳನ್ನು ರದ್ದುಗೊಳಿಸಲಾಗಿದೆ.
ದೆಹಲಿ ಮತ್ತು ಅದರ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಮಳೆಯ ಅಬ್ಬರಕ್ಕೆ ದೆಹಲಿ-ನೋಯ್ಡಾ , ಹಲವು ಪ್ರದೇಶಗಳು ಸಂಪೂರ್ಣವಾಗಿ ಮುಳುಗಿ ಹೋಗಿವೆ.