ದೋಡಾ: ಜಮ್ಮು ಮತ್ತು ಕಾಶ್ಮೀರದ ದೋಡಾ ಜಿಲ್ಲೆಯಲ್ಲಿ ಭಯೋತ್ಪಾದಕರೊಂದಿಗೆ ನಡೆದ ಭೀಕರ ಗುಂಡಿನ ಚಕಮಕಿಯಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ನಾಲ್ವರು ಸೇನಾ ಸಿಬ್ಬಂದಿ ಹುತಾತ್ಮರಾಗಿದ್ದಾರೆ.
ಸೋಮವಾರ ರಾತ್ರಿ ದೋಡಾದ ಅರಣ್ಯ ಪ್ರದೇಶದಲ್ಲಿ ಭಯೋತ್ಪಾದಕರೊಂದಿಗಿನ ಗುಂಡಿನ ಚಕಮಕಿಯಲ್ಲಿ ತೀವ್ರವಾಗಿ ಗಾಯಗೊಂಡಿದ್ದ ಸೇನಾ ಅಧಿಕಾರಿ ಮತ್ತು ಮೂವರು ಸಿಬ್ಬಂದಿ ಸಾವನ್ನಪ್ಪಿದ್ದಾರೆ ಎಂದು ಮೂಲಗಳು ತಿಳಿಸಿವೆ. ಕ್ಯಾಪ್ಟನ್ ಬ್ರಿಜೇಶ್ ಥಾಪಾ, ನಾಯಕ್ ಡಿ ರಾಜೇಶ್, ಸಿಪಾಯಿ ಬಿಜೇಂದ್ರ ಹಾಗೂ ಸಿಪಾಯಿ ಅಜಯ್ ಹುತಾತ್ಮರಾಗಿದ್ದಾರೆ.