ಝಾರ್ಸುಗುಡಾ: ಸುಮಾರು 50 ಪ್ರಯಾಣಿಕರನ್ನು ಹೊತ್ತೊಯ್ಯುತ್ತಿದ್ದ ದೋಣಿಯೊಂದು ಮುಳುಗಿ ನಾಲ್ವರು ಸಾವನ್ನಪ್ಪಿದ್ದಾರೆ ಎಂದು ಹೇಳಲಾಗಿದೆ. ಈ ಘಟನೆ ಒಡಿಶಾದ (Odisha boat capsize) ಝಾರ್ಸುಗುಡಾ ಜಿಲ್ಲೆಯ ಮಹಾನದಿಯಲ್ಲಿ ಶುಕ್ರವಾರ ತಡರಾತ್ರಿ (ಏ.19) ನಡೆದಿದೆ ಎಂದು ಹೇಳಲಾಗಿದೆ.
ನಾಪತ್ತೆಯಾದವರ ಪತ್ತೆಗಾಗಿ ಕಾರ್ಯಚರಣೆ ನಡೆಸಲಾಗುತ್ತಿದೆ ಎಂದು ಹೇಳಿದೆ. ಈ ಬಗ್ಗೆ ಹಿರಿಯ ಪೊಲೀಸ್ ಅಧಿಕಾರಿ ಚಿಂತಾಮಣಿ ಪ್ರಧಾನ್ ಅವರು ಮಾಧ್ಯಮಗಳಿಗೆ ಮಾಹಿತಿ ನೀಡಿದ್ದಾರೆ.