ಕಾಲಿವುಡ್ ನಟ ದಳಪತಿ ವಿಜಯ್ ಶುಕ್ರವಾರ ತಮ್ಮ ರಾಜಕೀಯ ಪಕ್ಷವಾದ ‘ತಮಿಳಗ ವೆಟ್ರಿ ಕಳಗಂ’ ಅನೌನ್ಸ್ ಮಾಡಿದ್ದಾರೆ. ಪಾರದರ್ಶಕ, ಜಾತಿ-ಮುಕ್ತ ಮತ್ತು ಭ್ರಷ್ಟಾಚಾರ ಮುಕ್ತ ಆಡಳಿತದೊಂದಿಗೆ ಮೂಲಭೂತ ರಾಜಕೀಯ ಬದಲಾವಣೆ ಎಂದು ನಟ ಟ್ವೀಟ್ ಮಾಡಿದ್ದಾರೆ.
ಕಳೆದ ವಾರ ಚೆನ್ನೈನಲ್ಲಿ ನಡೆದ ಸಭೆಯಲ್ಲಿ ಅವರ ಅಭಿಮಾನಿಗಳ ಸಂಘ ವಿಜಯ್ ಮಕ್ಕಳ್ ಇಯಕ್ಕಂ ರಾಜಕೀಯ ಪಕ್ಷದ ರಚನೆಗೆ ಒಪ್ಪಿಗೆ ನೀಡಿದ ನಂತರ ಈ ಒಂದು ಬಿಗ್ ಅನೌನ್ಸ್ಮೆಂಟ್ ಬಂದಿದೆ.
ನಟ ಬಿಡುಗಡೆ ಮಾಡಿದ ಹೇಳಿಕೆಯಲ್ಲಿ ನಾವು ನಮ್ಮ ಪಕ್ಷ ‘ತಮಿಳಗ ವೆಟ್ರಿ ಕಳಗಂ’ ಅನ್ನು ನೋಂದಾಯಿಸಲು ಚುನಾವಣಾ ಆಯೋಗಕ್ಕೆ ಇಂದು ಅರ್ಜಿ ಸಲ್ಲಿಸುತ್ತಿದ್ದೇವೆ. ಮುಂಬರುವ 2026 ರ ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧಿಸಿ ಗೆಲ್ಲುವುದು ಮತ್ತು ಮೂಲಭೂತ ರಾಜಕೀಯ ಬದಲಾವಣೆ ತರುವುದು ನಮ್ಮ ಗುರಿಯಾಗಿದೆ ಎಂದಿದ್ದಾರೆ ನಟ.