ಭೋಪಾಲ್: ಮಧ್ಯಪ್ರದೇಶದ ಹರ್ದದ ಬೈರಾಗರ್ ಪ್ರದೇಶದ ಮಗರ್ಧ ರಸ್ತೆಯ ಬಳಿ ಇರುವ ಕಟ್ಟಡದಲ್ಲಿ ಅಕ್ರಮ ಪಟಾಕಿ ಕಾರ್ಖಾನೆಯಲ್ಲಿ ನಡೆದ ಬಾರಿ ಸ್ಫೋಟದಿಂದ ಸಾವನ್ನಪ್ಪಿದವರ ಸಂಖ್ಯೆ 11ಕ್ಕೆ ಏರಿಕೆಯಾಗಿದೆ ಎಂದು ತಿಳಿದುಬಂದಿದೆ.
ದುರ್ಘಟನೆಯಲ್ಲಿ ಸುಮಾರು 100 ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ. ಗಾಯಗೊಂಡವರು ಮತ್ತು ಸುಟ್ಟವರಿಗೆ ಚಿಕಿತ್ಸೆ ನೀಡಲಾಗುತ್ತಿದೆ.
60 ಮನೆಗಳಿಗೂ ಹಾನಿಯಾಗಿದೆ. ಮನೆಗಳಲ್ಲೂ ಬಿರುಕು ಬಿಟ್ಟಿವೆ ಎಂದು ತಿಳಿದುಬಂದಿದೆ. ಸ್ಥಳದಲ್ಲಿ ನಡೆಯುತ್ತಿರುವ ಸ್ಫೋಟಗಳಿಂದ ನೂರಕ್ಕೂ ಹೆಚ್ಚು ಮನೆಯಲ್ಲಿ ವಾಸವಿದ್ದವರನ್ನು ಸ್ಥಳಾಂತರಿಸಲಾಗಿದೆ. ಸ್ಥಳೀಯ ಆಡಳಿತ ಮತ್ತು ತುರ್ತು ಸೇವೆಗಳು ಸ್ಥಳದಲ್ಲಿ ಮೊಕ್ಕಾಂ ಹೂಡಲಾಗಿದ್ದು, ರಕ್ಷಣಾ ಕಾರ್ಯದಲ್ಲಿ ತೊಡಗಿಸಿಕೊಂಡಿವೆ.