ನವದೆಹಲಿ: 18ನೇ ಲೋಕಸಭಾ ಚುನಾವಣೆಯ (Lok Sabha Election) ಮೊದಲ ಹಂತದ ಮತದಾನ ಇಂದು ಶುರುವಾಗಿದೆ. ಕೇಂದ್ರಾಡಳಿತ ಪ್ರದೇಶ ಸೇರಿದಂತೆ 21 ರಾಜ್ಯಗಳ 102 ಕ್ಷೇತ್ರಗಳಲ್ಲಿ ಮತದಾನ ನಡೆಯುತ್ತಿದೆ. ನಾಗಾಲ್ಯಾಂಡ್‌ನ 6 ಜಿಲ್ಲೆಗಳಲ್ಲಿ ಇದುವರೆಗೂ ಶೂನ್ಯ ಮತದಾನ ಕಂಡು ಬಂದಿದೆ.
ಪ್ರತ್ಯೇಕ ಆಡಳಿತಕ್ಕೆ ಆಗ್ರಹಿಸುತ್ತಿರುವ ಪೂರ್ವ ನಾಗಾಲ್ಯಾಂಡ್ ಪೀಪಲ್ಸ್ ಆರ್ಗನೈಸೇಶನ್ (ENPO) ಸಾರ್ವಜನಿಕ ತುರ್ತು ಪರಿಸ್ಥಿತಿ ಘೋಷಿಸಿದೆ. ಜೊತೆಗೆ ಚುನಾವಣೆಯನ್ನು ಬಹಿಷ್ಕರಿಸುವಂತೆ ಸ್ಥಳೀಯರಿಗೆ ಕರೆ ನೀಡಿದೆ. ಈ ಹಿನ್ನೆಲೆಯಲ್ಲಿ ನಾಗಾಲ್ಯಾಂಡ್‌ನ ಆರು ಜಿಲ್ಲೆಗಳಾದ ಸೋನ್, ಟ್ಯೂನ್ಸಾಂಗ್, ಲಾಂಗ್ಲೆಂಗ್, ಕಿಫಿರ್, ಶಮಾಟರ್ ಮತ್ತು ನೋಕ್ಲಾಕ್ನಲ್ಲಿ ಇಂದು ಬಹುತೇಕ ಶೂನ್ಯ ಮತದಾನ ಕಂಡಿದೆ.