ಹಾಸನ : ಲೈಂಗಿಕ ದೌರ್ಜುನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಹಾಸನ ಲೋಕಸಭಾ ಕ್ಷೇತ್ರದ ಮಾಜಿ ಸಂಸದ ಪ್ರಜ್ವಲ್ ರೇವಣ್ಣ (Prajwal Revanna) ಅವರನ್ನು ಮತ್ತೆ ನ್ಯಾಯಾಂಗ ಬಂಧನಕ್ಕೆ ನೀಡಿ ಬೆಂಗಳೂರಿನ 42ನೇ ಎಸಿಎಂಎಂ ನ್ಯಾಯಾಲಯ ಆದೇಶ ಹೊರಡಿಸಿದೆ. ನ್ಯಾಯಾಂಗ ಬಂಧನ ಹಿನ್ನೆಲೆಯಲ್ಲಿ ಪ್ರಜ್ವಲ್ ರೇವಣ್ಣ ಅವರನ್ನು ಪೊಲೀಸರು ಬೆಂಗಳೂರು ಕೇಂದ್ರ ಕಾರಾಗೃಹ (ಪರಪ್ಪನ ಅಗ್ರಹಾರ)ಕ್ಕೆ (Central Jail) ಕರೆದೊಯ್ಯದಿದ್ದಾರೆ.
ಹಾಸನದಲ್ಲಿ ವೈರಲ್ ಆದ ಅಶ್ಲೀಲ ವಿಡಿಯೋ ಹಾಗೂ ಅತ್ಯಾಚಾರ ಆರೋಪದಲ್ಲಿ ಪ್ರಜ್ವಲ್ ರೇವಣ್ಣ ಅವರು ಜೈಲು ಪಾಲಾಗಿದ್ದಾರೆ.