ಹಾಸನ : ಹಲವು ಮಹಿಳೆಯರ ಅತ್ಯಾಚಾರ ಆರೋಪ ಹೊತ್ತಿರುವ ಹಾಸನ ದ ಸಂಸದ ಪ್ರಜ್ವಲ್ ರೇವಣ್ಣ ಬಂಧನಕ್ಕೆ ಆಗ್ರಹಿಸಿ ಮೇ.30 ನಾಳೆ ಕರೆ ನೀಡಲಾಗಿರುವ ಹಾಸನ ಚಲೋ ಕಾರ್ಯಕ್ರಮಕ್ಕೆ ಕೌಂಟ್ ಡೌನ್ ಶುರುವಾಗಿದೆ.
ಕರ್ನಾಟಕ ರಾಜ್ಯ ಜನಪರ ಚಳುವಳಿಗಳ ಒಕ್ಕೂಟದಿಂದ ಕರೆನೀಡಲಾಗಿರುವ ಬೃಹತ್ ಹೋರಾಟಕ್ಕೆ ಹಾಸನ ಸಜ್ಜಾಗಿದ್ದು, ನಾಳಿನ ಹೋರಾಟದ ಸಲುವಾಗಿ ಹಾಸನದ ಡಿಸಿ ಕಛೇರಿ ಎದುರಿನ ಚತುಷ್ಪತ ರಸ್ತೆಯಲ್ಲಿ ಬೃಹತ್ ವೇದಿಕೆಯನ್ನ ಸಿದ್ದಗೊಳಿಸಲಾಗಿದೆ. ಸುಮಾರು ಹತ್ತು ಸಾವಿರಕ್ಕೂ ಅಧಿಕ ಜನರು ತಮ್ಮ ಹೋರಾಟದಲ್ಲಿ ಭಾಗಿಯಾಗಲಿದ್ದಾರೆ ಎಂದು ಸಂಘಟಕರು ಮಾಹಿತಿ ನೀಡಿದ್ದಾರೆ.