ನವದೆಹಲಿ: ಬಿಜೆಪಿ ಮತ್ತು ಪ್ರಧಾನಿ ಮೋದಿಯನ್ನು ಅಧಿಕಾರದಿಂದ ಕೆಳಗಿಳಿಸಲು ಮಾಡಿಕೊಂಡಿದ್ದ ಮೈತ್ರಿಕೂಟ ಚುನಾವಣೆಗೂ ಮುನ್ನವೇ ಮುರಿದು ಬೀಳುತ್ತಿದೆ. ಕಾಂಗ್ರೆಸ್ ನೇತೃತ್ವದಲ್ಲಿ ಮಾಡಿಕೊಂಡಿದ್ದ ಈ ಮೈತ್ರಿ ಇದೀಗ ಸೀಟು ಹಂಚಿಕೆ ವಿಚಾರದಲ್ಲಿ ಗೊಂದಲ ಉಂಟಾಗಿ ಒಂದೊಂದೆ ಪಕ್ಷಗಳು ಮೈತ್ರಿ ಕೂಟದಿಂದ ಹೊರ ಬರುತ್ತಿವೆ.
ಪಶ್ಚಿಮ ಬಂಗಾಳದಲ್ಲಿ ಟಿಎಂಸಿ ಏಕಾಂಗಿಯಾಗಿ ಲೋಕಸಭಾ ಚುನಾವಣೆಯಲ್ಲಿ ಸ್ಪರ್ಧಿಸಲು ನಿರ್ಧರಿಸಿಕೊಂಡಿದೆ. ಟಿಎಂಸಿ ಬೆನ್ನಲ್ಲೇ ಜೆಡಿಯು ಮತ್ತು ಆರ್ಜೆಡಿ ಮೈತ್ರಿ ಮುರಿದುಕೊಂಡು ಎನ್‌ಡಿಎ ಸೇರಿಕೊಂಡಿವೆ.
ಮೈತ್ರಿಕೂಟ ರಚನೆಯ ಪ್ರಮುಖ ರೂವಾರಿಯಾಗಿದ್ದ ಬಿಹಾರ ಸಿಎಂ ನಿತೀಶ್ ಕುಮಾರ್ ಅವರು ಭಾರತ ಮೈತ್ರಿಕೂಟದಿಂದ ಹೊರಬಂದು ಬಿಜೆಪಿ ನೇತೃತ್ವದ ಎನ್‌ಡಿಎ ಜೊತೆ ಮತ್ತೆ ಮೈತ್ರಿ ಮಾಡಿಕೊಂಡಿದ್ದಾರೆ.
ದೆಹಲಿ ಸಿಎಂ ಮತ್ತು ಎಎಪಿ ಮುಖ್ಯಸ್ಥ ಅರವಿಂದ್ ಕೇಜ್ರಿವಾಲ್ ಇತ್ತೀಚೆಗೆ ಪಂಜಾಬ್‌ನ ಎಲ್ಲಾ 14 ಲೋಕಸಭಾ ಸ್ಥಾನಗಳಲ್ಲಿ ಆಮ್ ಆದ್ಮಿ ಪಕ್ಷ (ಎಎಪಿ) ಸ್ಪರ್ಧಿಸಲಿದೆ ಎಂದು ಘೋಷಿಸಿ ಮತ್ತೊಂದು ಶಾಕ್ ನೀಡಿದ್ದಾರೆ.