ಬಾಗಲಕೋಟೆ : ಪ್ರಧಾನಿ ನರೇಂದ್ರ ಮೋದಿ ಮತ್ತು ತಾಯಿಯ ಸ್ಕೆಚ್ ನೀಡಿದ್ದ ಬಾಗಲಕೋಟೆಯ ಯುವತಿ ನಾಗರತ್ನ ಮೇಟಿಗೆ ಕೊಟ್ಟ ಮಾತಿನಂತೆ ಮೋದಿ ಇದೀಗ ಪತ್ರ ಬರೆದಿದ್ದಾರೆ. ಏಪ್ರಿಲ್ 29 ರಂದು ಲೋಕಸಭಾ ಚುನಾವಣೆ ಹಿನ್ನೆಲೆ ಬಾಗಲಕೋಟೆ ಆಗಮಿಸಿದ್ದಾಗ ಯುವತಿಯ ಸ್ಕೆಚ್ ಪ್ರಧಾನಿ ಮೋದಿ ಗಮನ ಸೆಳೆದಿತ್ತು. ತಾನು ಚಿತ್ರಿಸಿದ ಸ್ಕೆಚ್ ಹಿಡಿದು ಯುವತಿ ವೇದಿಕೆ ಮುಂಭಾಗದಲ್ಲಿ ನಿಂತಿದ್ದಳು. ತಾಯಿಯ ಫೋಟೋ ಫ್ರೆಮ್ ನೋಡಿ ಎಸ್ಪಿಜಿ ಸಿಬ್ಬಂದಿಗೆ ಹೇಳಿ ಮೋದಿ ತರಿಸಿಕೊಂಡಿದ್ದರು.
ಸುಂದರವಾದ ಭಾವಚಿತ್ರ ಉಡುಗೊರೆಯಾಗಿ ನೀಡಿದಕ್ಕೆ ನಾನು ನಿಮಗೆ ಧನ್ಯವಾದ ತಿಳಿಸುತ್ತೇನೆ. ಈ ಕಲಾತ್ಮಕ ಕೆಲಸವು ಮಾನವ ಭಾವನೆಗಳ ಪ್ರಾಮುಖ್ಯತೆಯನ್ನು ತೋರಿಸುತ್ತದೆ. ನಿಮ್ಮ ವರ್ಣಚಿತ್ರ ರೋಮಾಂಚಕ ಪ್ರದರ್ಶನವು ಯುವಶಕ್ತಿಯ ಸಾರವನ್ನು ಒಳಗೊಂಡಿರುತ್ತದೆ. ಹೊಸ ಭಾರತವನ್ನು ರೂಪಿಸುವ ಮತ್ತು ನಮ್ಮ ಯುವಕರಿಗೆ ಭರವಸೆಯ ಭವಿಷ್ಯವನ್ನು ಭದ್ರಪಡಿಸುವ ನನ್ನ ಬದ್ಧತೆಯನ್ನು ಪ್ರೇರೇಪಿಸುತ್ತದೆ.