ಬೆಂಗಳೂರು : ಬೆಂಗಳೂರಿನಲ್ಲಿ ಗಣೇಶ ಚತುರ್ಥಿಯನ್ನು ಆಚರಿಸುತ್ತಾರೆ. ಜನ ಪ್ರತಿಷ್ಠಾಪಿಸಿದ್ದ ಗಣೇಶ ಮೂರ್ತಿಯನ್ನು ವಿಸರ್ಜಿಸುವ ಕಾರ್ಯಕ್ರಮ ಇಟ್ಟುಕೊಂಡಿರುತ್ತಾರೆ. ಈ ಹಿನ್ನೆಲೆ ಬೆಂಗಳೂರಿನಲ್ಲಿ ಜಿಲ್ಲಾಡಳಿತ ಕಠಿಣ ಕ್ರಮ ಕೈಗೊಳ್ಳಲು ಮುಂದಾಗಿದೆ.
ಬೆಂಗಳೂರು ನಗರ ಜಿಲ್ಲೆಯಾದ್ಯಂತ ಭಾನುವಾರ (31-08-2025) ಗಣೇಶ ಚತುರ್ಥಿ ಉತ್ಸವದ ಸಾಮೂಹಿಕ ಗಣೇಶ ಮೂರ್ತಿ ವಿಸರ್ಜನೆಯ ಹಿನ್ನೆಲೆಯಲ್ಲಿ ಕಾನೂನು ಮತ್ತು ಸುವ್ಯವಸ್ಥೆ ಕಾಪಾಡುವ ಸಲುವಾಗಿ ಜಿಲ್ಲಾಡಳಿತವು ಮದ್ಯ ನಿಷೇಧಾಜ್ಞೆಯನ್ನು ಘೋಷಿಸಿದೆ. ಈ ಆದೇಶವು ಆಗಸ್ಟ್ 31, 2025ರ ಬೆಳಿಗ್ಗೆ 6:00 ಗಂಟೆಯಿಂದ ಸೆಪ್ಟೆಂಬರ್ 1, 2025ರ ಬೆಳಿಗ್ಗೆ 6:00 ಗಂಟೆಯವರೆಗೆ ಜಾರಿಯಲ್ಲಿರುತ್ತದೆ ಎಂದು ಬೆಂಗಳೂರು ನಗರ ಜಿಲ್ಲಾಧಿಕಾರಿ ಜಗದೀಶ್ ಜಿ. ಅವರು ಆದೇಶ ಹೊರಡಿಸಿದ್ದಾರೆ.