ನವದೆಹಲಿ: ಕೇಂದ್ರದಲ್ಲಿ ಮತ್ತೊಮ್ಮೆ ಎನ್ಡಿಎ ಸರ್ಕಾರ ರಚಿಸುವುದು ಖಚಿತವಾಗಿದ್ದು, ನರೇಂದ್ರ ಮೋದಿ ಇದೇ ಭಾನುವಾರ 3ನೇ ಅವಧಿಗೆ ಪ್ರಧಾನಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಲಿದ್ದಾರೆ. ಇದರ ನಡುವೆ ಕಾಂಗ್ರೆಸ್ ನಾಯಕ ಹಾಗೂ ಛತ್ತೀಸ್‌ಗಢದ ಮಾಜಿ ಮುಖ್ಯಮಂತ್ರಿ ಭೂಪೇಶ್ ಬಘೇಲ್ (Bhupesh Baghel) ಅಚ್ಚರಿಯ ಹೇಳಿಕೆಯೊಂದನ್ನು ನೀಡಿದ್ದು, ಇನ್ನು 1 ವರ್ಷದೊಳಗೆ ದೇಶವು ಮಧ್ಯಂತರ ಸಾರ್ವತ್ರಿಕ ಚುನಾವಣೆಗೆ ಸಾಕ್ಷಿಯಾಗಲಿದೆ ಎಂದು ಭವಿಷ್ಯ ನುಡಿದಿದ್ದಾರೆ.
ಭಾರತ ದೇಶದಲ್ಲಿ ಇನ್ನು 6 ತಿಂಗಳಿಂದ 1 ವರ್ಷದೊಳಗೆ ಮಧ್ಯಂತರ ಲೋಕಸಭಾ ಚುನಾವಣೆ ನಡೆಯುವ ಸಾಧ್ಯತೆಯಿದೆ ಎಂದು ಕಾಂಗ್ರೆಸ್ ನಾಯಕ ಮತ್ತು ಛತ್ತೀಸ್‌ಗಢದ ಮಾಜಿ ಮುಖ್ಯಮಂತ್ರಿ ಭೂಪೇಶ್ ಬಘೇಲ್ ಹೇಳಿದ್ದಾರೆ. ಅದಕ್ಕೆ ಸಿದ್ಧರಾಗುವಂತೆ ಕಾಂಗ್ರೆಸ್ ಕಾರ್ಯಕರ್ತರನ್ನು ಬಘೇಲ್ ಮನವಿ ಮಾಡಿದ್ದಾರೆ.