ಮುಂಬೈ: ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ (Rahul Gandhi) ಭಾರತ್ ಜೋಡೋ ನ್ಯಾಯ ಯಾತ್ರೆಗೆ (Bharat Jodo Nyay Yatra) ಚಾಲನೆ ನೀಡುತ್ತಿದ್ದಂತೆ, ಕಾಂಗ್ರೆಸ್ (Congress) ಪಕ್ಷಕ್ಕೆ ಅನಿರೀಕ್ಷಿತ ಆಘಾತ ಎದುರಾಗಿದೆ.
ಪಕ್ಷದ ಹಿರಿಯ ನಾಯಕ ಹಾಗೂ ಕೇಂದ್ರದ ಮಾಜಿ ಸಚಿವ ಮಿಲಿಂದ್ ದಿಯೋರಾ (Miland Deora) ಕಾಂಗ್ರೆಸ್ಗೆ ರಾಜೀನಾಮೆ ನೀಡಿದ್ದಾರೆ. ಕಾಂಗ್ರೆಸ್ ಪಕ್ಷದೊಂದಿಗಿನ 55 ವರ್ಷಗಳ ಒಡನಾಟ ಅಂತ್ಯಗೊಳಿಸಿದ್ದಾರೆ.
26 ಪಕ್ಷಗಳು ಮುಂಬರುವ ಲೋಕ ಸಭಾ ಚುನಾವಣೆಯಲ್ಲಿ ಬಿಜೆಪಿ ಮತ್ತು ಎನ್ಡಿಎ ವಿರುದ್ಧ ಹೋರಾಡುವುದಕ್ಕಾಗಿ INDIA ಬ್ಲಾಕ್ ರಚಿಸಿಕೊಂಡಿದ್ದರೆ, ಇತ್ತ ಕಾಂಗ್ರೆಸ್ನ ಪ್ರಬಲ ನಾಯಕನೇ NDAನಲ್ಲಿರುವ ಶಿವಸೇನೆ ಪಕ್ಷಕ್ಕೆ ಸೇರಿಕೊಂಡಿದ್ದಾರೆ.