ನವದೆಹಲಿ: ಪ್ರಧಾನಿ ಮೋದಿ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿರುವ ಮೂವರು ಸಚಿವರ ಕುರಿತು ಭಾರತ ಮತ್ತು ಮಾಲ್ಡೀವ್ಸ್ ನಡುವಿನ ರಾಜತಾಂತ್ರಿಕ ವಿವಾದ ಎರಡನೇ ದಿನಕ್ಕೆ ಕಾಲಿಟ್ಟಿದ್ದು, ದೆಹಲಿಯಲ್ಲಿರುವ ಮಾಲ್ಡೀವ್ಸ್ ಹೈಕಮಿಷನರ್ ಇಬ್ರಾಹಿಂ ಶಾಹೀಬ್ ಅವರನ್ನು ಬೆಳಗ್ಗೆ 9 ಗಂಟೆಗೆ ಕರೆಸಿ ತೀವ್ರ ವಿರೋಧ ವ್ಯಕ್ತಪಡಿಸಿದೆ.
ಮಧ್ಯಾಹ್ನ 12.30 ರ ಸುಮಾರಿಗೆ, ಮಾಲ್ಡೀವ್ಸ್ನಲ್ಲಿರುವ ಭಾರತೀಯ ಹೈಕಮಿಷನರ್ ಮುನು ಮಹಾವರ್ ಅವರನ್ನು ಮಾಲ್ಡೀವ್ಸ್ ವಿದೇಶಾಂಗ ಸಚಿವಾಲಯವು ಕರೆಸಿತ್ತು.
ಬಾಲಿವುಡ್ ಸೂಪರ್ಸ್ಟಾರ್ ಅಕ್ಷಯ್ ಕುಮಾರ್ , ನಟಿ ಶ್ರದ್ಧಾ ಕಪೂರ್, ನಟ ಜಾನ್ ಅಬ್ರಹಾಂ, ನಟ ಸಲ್ಮಾನ್ ಖಾನ್, ಕ್ರಿಕೆಟ್ ದಿಗ್ಗಜ ಸಚಿನ್ ತೆಂಡೂಲ್ಕರ್ ಸೇರಿದಂತೆ ಹಲವಾರು ಸೆಲೆಬ್ರಿಟಿಗಳು ಮಾಲ್ಡೀವ್ಸ್ ವಿರುದ್ಧ ಕಿಡಿಕಾರಿದ್ದರು.