ಇಂಫಾಲ್ : ಮಣಿಪುರದಲ್ಲಿ ಹಿಂಸಾಚಾರ ಭುಗಿಲೆದ್ದಿದೆ. ಇಂಫಾಲ್ ಪೂರ್ವ ಮತ್ತು ಕಾಂಗ್‌ಪೋಕ್ಪಿ ಜಿಲ್ಲೆಗಳ ಪರಿಧಿಯ ಪ್ರದೇಶದಲ್ಲಿ ಗುಂಡಿನ ಕಾಳಗ ನಡೆದಿದ್ದು ಇಬ್ಬರು ಸಾವಿಗೀಡಾಗಿದ್ದಾರೆ .
ಕಾಂಗ್‌ಪೋಕ್ಪಿ ಮತ್ತು ಇಂಫಾಲ್ ಪಶ್ಚಿಮದ ಪಕ್ಕದ ಪ್ರದೇಶಗಳಾದ ಕೌಟ್ರುಕ್‌ನಲ್ಲಿ ಇಂದು ಮಧ್ಯಾಹ್ನ 2:30 ರ ಸುಮಾರಿಗೆ ಗುಂಡಿನ ದಾಳಿ ನಡೆದಿದೆ.
ಘಟನೆಯಲ್ಲಿ ಇಬ್ಬರು ಸಾವಿಗೀಡಾಗಿದ್ದಾರೆ ಎಂದು ವರದಿಯಾಗಿದೆ. ಗಾಯಗೊಂಡವರನ್ನು ರಾಜ್ಯ ರಾಜಧಾನಿ ಇಂಫಾಲ್‌ನಲ್ಲಿರುವ RIMS ಆಸ್ಪತ್ರೆಗೆ ಕಳುಹಿಸಲಾಗಿದೆ.
ಮೃತರಿಬ್ಬರನ್ನು ನಾಂಗ್‌ತೊಂಬಮ್ ಮೈಕೆಲ್ (33) ಮತ್ತು ಮೈಸ್ನಮ್ ಖಬಾ (23) ಎಂದು ಗುರುತಿಸಲಾಗಿದೆ. ಇದೇ ವೇಳೆ ಘಟನೆಯಲ್ಲಿ ಇತರ ಮೂವರು ಗಾಯಗೊಂಡಿದ್ದಾರೆ. ಮೃತ ದೇಹಗಳನ್ನೂ ರಿಮ್ಸ್ ಆಸ್ಪತ್ರೆಯ ಶವಾಗಾರದಲ್ಲಿ ಇರಿಸಲಾಗಿದೆ