ಮುಂಬೈ: ಮಧ್ಯಂತರ ಬಜೆಟ್ ಮಂಡಿಸಿದ ನಂತರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ನೆಟ್ವರ್ಕ್ 18 ಎಡಿಟರ್ ಇನ್ ಚೀಫ್ ರಾಹುಲ್ ಜೋಶಿ ಅವರೊಂದಿಗೆ ವಿಶೇಷ ಸಂದರ್ಶನದಲ್ಲಿ ಭಾಗಿಯಾಗಿ, ಆರ್ಥಿಕ ಕ್ಷೇತ್ರದಲ್ಲಿನ ಸುಧಾರಣೆ ಹಾಗೂ ಬೆಳವಣಿಗೆ ಕುರಿತು ಮಾತನಾಡಿದ್ದಾರೆ.
ಸಂದರ್ಶನದಲ್ಲಿ, ಭಾರತವು ಶೇಕಡಾ 7 ರಷ್ಟು ಆರ್ಥಿಕ ಬೆಳವಣಿಗೆಯೊಂದಿಗೆ ಮುಂದುವರಿಯಲು ಸಾಧ್ಯವಾಗುತ್ತದೆಯೇ? ಮತ್ತು ಅದಕ್ಕಿರುವ ಸವಾಲುಗಳೆನು? ಎಂದು ಹಣಕಾಸು ಸಚಿವರನ್ನು ಪ್ರಶ್ನಿಸಲಾಯಿತು. ಈ ಪ್ರಶ್ನೆಗೆ ಉತ್ತರಿಸಿದ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್, ಖಂಡಿತವಾಗಿ ನಾವು 7 ಶೇಕಡಾ ಬೆಳವಣಿಗೆ ದರವನ್ನು ಸಾಧಿಸುತ್ತೇವೆ ಎಂದು ವಿಶ್ವಾಸ ವ್ಯಕ್ತಪಡಿಸಿದ್ದಾರೆ.