ಚಿಕ್ಕಮಗಳೂರು: ಮಲೆನಾಡು, ಕರಾವಳಿ ಜಿಲ್ಲೆಗಳಲ್ಲಿ ಗುಡ್ಡ ಕುಸಿತ ಸಂಭವಿಸುವ ಮಲೆನಾಡು-ಕರಾವಳಿ ಜಿಲ್ಲೆಗಳಲ್ಲಿ ಒಟ್ಟು 300 ಕೋಟಿ. ರೂ. ವೆಚ್ಚದಲ್ಲಿ ಗುಡ್ಡ ಕುಸಿತ ತಡೆಯುವ ಕಾಮಗಾರಿಗಳನ್ನು ಕೈಗೊಳ್ಳಲಾಗುವುದು ಎಂದು ಕಂದಾಯ ಇಲಾಖೆ ಸಚಿವ ಕೃಷ್ಣ ಭೈರೇಗೌಡ ಹೇಳಿದ್ದಾರೆ.
ರಾಜ್ಯದಲ್ಲಿ ಜೂನ್ ಮತ್ತು ಜುಲೈ ತಿಂಗಳಲ್ಲಿ ಶೇ.32ರಷ್ಟು ವಾಡಿಕೆಗಿಂತ ಹೆಚ್ಚು ಮಳೆಯಾಗಿದ್ದು, 62 ಸಾವಿರ ಹೆಕ್ಟೇರ್ ಪ್ರದೇಶದಲ್ಲಿ ಬೆಳೆ ಹಾನಿಯಾಗಿದೆ.